ಪುತ್ತೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಜೂ.7 ರಿಂದ 11ರ ವರೆಗೆ ಭಾರೀ ಮಳೆಯಾಗಲಿದ್ದು, ಸಮುದ್ರದಲ್ಲಿ ನೀರಿನ ಅಬ್ಬರ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ತೀರದ ಸಾರ್ವಜನಿಕರು ಎಚ್ಚರ ವಹಿಸುವಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಸೂಚನೆ ನೀಡಿದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ(ಬಿಪರ್ಜಾಯ್) ರೂಪುಗೊಂಡು ಮುಂಗಾರು ಪ್ರಬಲಗೊಂಡು ಮಳೆಯಾಗುವ ಸಾಧ್ಯತೆ ಹೆಚ್ಚಾಗಿದೆ.