ಪಟ್ಟೆ ಪ್ರತಿಭಾ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

0

ಬಡಗನ್ನೂರುಃ ಪಟ್ಟೆ ಪ್ರತಿಭಾ ಪ್ರೌಢಶಾಲೆಯಲ್ಲಿ  ವಿಶ್ವ ಪರಿಸರ ದಿನಾಚರಣೆಯನ್ನು ಜೂ. 5 ರಂದು ಆಚರಿಸಲಾಯಿತು.

ಕಾರ್ಯಕ್ರಮ ಅಂಗವಾಗಿ  ವಿದ್ಯಾರ್ಥಿಗಳಿಗೆ ಪರಿಸರ ಗೀತೆ ಮತ್ತು ಭಾಷಣ ಸ್ಪರ್ಧೆಯನ್ನು ಏರ್ಪಡಿಸಿ, ಭಾಗವಹಿಸಿದ್ದ ಎಲ್ಲಾ ವಿದ್ಯಾರ್ಥಿಗಳಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.  ಸಭಾ ಕಾರ್ಯಕ್ರಮವು ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ ಬಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 

ಕಾರ್ಯಕ್ರಮದಲ್ಲಿ  ಶಾಲಾ ಶಿಕ್ಷಕ ವೃಂದದವರು, ಅಕ್ಷರದಾಸೋಹ ಸಿಬ್ಬಂದಿಗಳು ಮತ್ತು ಮಕ್ಕಳು ಭಾಗವಹಿಸಿದ್ದರು .

10ನೇ ತರಗತಿಯ ವಿದ್ಯಾರ್ಥಿಗಳಾದ ಆಶ್ಲೇಷ ಸ್ವಾಗತಿಸಿ  ರಾಹಿಲ ವಂದಿಸಿದರು.  ಜೀವನ್ಯ ಕಾರ್ಯಕ್ರಮ ನಿರೂಪಿಸಿದರು

LEAVE A REPLY

Please enter your comment!
Please enter your name here