ಪುತ್ತೂರು:ನರಿಮೊಗರು ಸಾಂದೀಪನಿ ವಿದ್ಯಾಸಂಸ್ಥೆ ಇಲ್ಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿಶ್ವ ಪರಿಸರ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು.
ವಿದ್ಯಾಸಂಸ್ಥೆಯ ಮುಖ್ಯ ಶಿಕ್ಷಕಿ ಹಾಗೂ ಜಿಲ್ಲಾ ಗೈಡ್ ಉಪ ಆಯುಕ್ತೆ ಜಯಮಾಲಾ.ವಿ.ಎನ್. ವಿಶ್ವ ಪರಿಸರ ದಿನದ ಮಹತ್ವ ಹಾಗೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾಸಂಸ್ಥೆಯ ಸ್ಕೌಟ್ಸ್, ಗೈಡ್ಸ್, ಕಬ್,ಬುಲ್ ಬುಲ್ ವಿದ್ಯಾರ್ಥಿಗಳು ವಿವಿಧ ಹಣ್ಣುಗಳು,ತರಕಾರಿಗಳು,ಗಿಡಮರಗಳ ಬೀಜಗಳನ್ನು ಬಳಸಿ ತಾವೇ ತಯಾರಿಸಿದ ಬೀಜದ ಉಂಡೆಗಳನ್ನು ಶಾಲಾ ಪರಿಸರದಲ್ಲಿ ಹಾಗೂ ಪಕ್ಕದ ಕಾಡು ಪ್ರದೇಶದಲ್ಲಿ ಎಸೆಯುವ ಮೂಲಕ ವಿಶಿಷ್ಠವಾಗಿ ಪರಿಸರ ಕಾಳಜಿಯನ್ನು ವ್ಯಕ್ತಪಡಿಸಿದರು.
ಈ ಕಾರ್ಯಕ್ರಮಕ್ಕೆ ಸಂಸ್ಥೆಯ ಸಂಚಾಲಕ ಭಾಸ್ಕರ ಆಚಾರ್ ಹಿಂದಾರು, ಮುಖ್ಯ ಶಿಕ್ಷಕಿ ಜಯಮಾಲಾ.ವಿ.ಎನ್ ಮಾರ್ಗದರ್ಶನ ಮಾಡಿದರು.ಸಂಸ್ಥೆಯ ಸ್ಕೌಟ್ಸ್, ಗೈಡ್ಸ್ ,ಕಬ್ ,ಬುಲ್ ಬುಲ್ ಶಿಕ್ಷಕ ಶಿಕ್ಷಕಿಯರು, ಸಹ ಶಿಕ್ಷಕರು,ಸಿಬ್ಬಂದಿ ವರ್ಗದವರು ಸಹಕರಿಸಿದರು. ಈ ಕಾರ್ಯಕ್ರಮದಲ್ಲಿ ಸ್ಕೌಟ್ಸ್, ಗೈಡ್ಸ್, ಕಬ್,ಬುಲ್ ಬುಲ್ ವಿದ್ಯಾರ್ಥಿಗಳು ಸಕ್ರಿಯರಾಗಿ ಭಾಗವಹಿಸಿದರು.