ಕಡಬ: ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಕಾಣಿಯೂರು ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ರೇವತಿರವರಿಗೆ ಸನ್ಮಾನ

0

ಕಾಣಿಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಣಿಯೂರು ಇಲ್ಲಿ ಏಳು ವರ್ಷಗಳಿಂದ ದೈಹಿಕ ಶಿಕ್ಷಣ ಶಿಕ್ಷಕಿ ಮೇ.31 ರಂದು ಕರ್ತವ್ಯದಿಂದ ನಿವೃತ್ತರಾದ ರೇವತಿ ಪಿ. ರವರನ್ನು ಕಾಣಿಯೂರು ಸ. ಹಿ. ಪ್ರಾ. ಶಾಲೆಯಲ್ಲಿ ಕಡಬ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಕಡಬ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಗ್ರೇಡ್-2 ವತಿಯಿಂದ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಕಡಬ ತಾಲೂಕು ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸ(ರಿ) ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಕೆ ಮತ್ತು ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ರಾಮಣ್ಣ ಬಿ, ಕಾಣಿಯೂರು ಶಾಲಾ ಮುಖ್ಯ ಗುರುಗಳಾದ ಶ್ರೀ ಪುಂಡಲಿಕ ಪೂಜಾರ ಹಾಗೂ ಅಧ್ಯಾಪಕ ವೃಂದ ಹಾಗೂ ನಿವೃತ್ತ ಶಿಕ್ಷಕಿಯ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here