ಕಡಬ ಸೈಂಟ್ ಜೋಕಿಮ್ಸ್ ನಲ್ಲಿ ಪರಿಸರ ದಿನಾಚರಣೆ

0

ಕಡಬ: ಇಲ್ಲಿನ ಸೈಂಟ್ ಜೋಕಿಮ್ಸ್ ಸಭಾಭವನದಲ್ಲಿ ಪರಿಸರ ದಿನಾಚರಣೆಯನ್ನು ಜೂ. 5ರಂದು ನಡೆಸಲಾಯಿತು.


ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಚಾಲಕ ರೆ. ಫಾದರ್ ಪೌಲ್ ಪ್ರಕಾಶ್ ಡಿಸೋಜಾ ವಹಿಸಿ ಮಾತನಾಡಿ, ನಮ್ಮ ಜೀವನವು ಸಂಪೂರ್ಣವಾಗಿ ಪರಿಸರದ ಮೇಲೆ ಅವಲಂಬಿತವಾಗಿದೆ, ಆರೋಗ್ಯಕರ ಸಮಾಜವು ಶುದ್ದ ಪರಿಸರದಿಂದ ಮಾತ್ರ ರೂಪುಗೊಳ್ಳುತ್ತದೆ. ಪರಿಸರದ ಬಗ್ಗೆ ಜನರಿಗೆ ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಮತ್ತು ನೈಸರ್ಗಿಕ ಪರಿಸರದ ಮಹತ್ವವನ್ನು ಅರ್ಥಮಾಡಿಕೊಳ್ಳಲು ನಾವು ಪ್ರತಿವರ್ಷ ಜೂನ್ 5ರಂದು ವಿಶ್ವ ಪರಿಸರ ದಿನವನ್ನಾಗಿ ಆಚರಿಸುತ್ತೇವೆ ಎಂದರು.


ಮುಖ್ಯ ಅತಿಥಿಯಾಗಿದ್ದ ರೆ. ಫಾದರ್ ಅಶೋಕ್ ಡಿಸೋಜ ರವರು ಮಾತನಾಡಿ ಪ್ರತಿ ವರ್ಷ ಜೂನ್ 5 ರಂದು ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಥೀಮ್ ನೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಥೀಮ್ BEAT PLASTIC POLLUTION ಎಂದಾಗಿದೆ ಎಂದು ತಿಳಿಸಿದರು.


2022-23ನೇ ಸಾಲಿನ ಹತ್ತನೇ ತರಗತಿಯ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ವೇದಿಕೆಯಲ್ಲಿ ಸೈಂಟ್ ಆನ್ಸ್ ಶಾಲೆಯ ಪ್ರಾಂಶುಪಾಲ ರೆ. ಫಾದರ್ ಅಮಿತ್ ಪ್ರಕಾಶ್ ರೋಡ್ರಿಗಸ್, ಚರ್ಚ್ ನ ಪಾಲನಾ ಮಂಡಳಿಯ ಉಪಾಧ್ಯಕ್ಷ ಡೆನ್ನಿಸ್ ಫೆರ್ನಾಂಡಿಸ್ ರವರು ಉಪಸ್ಥಿತರಿದ್ದರು.


ಪರಿಸರದ ಬಗ್ಗೆ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಕಾರ್ಯಕ್ರಮ ನಡೆಯಿತು. ಲೋಲಾಕ್ಷಿ ಸ್ವಾಗತಿಸಿ, ಆನಿ ಜೋಸೆಫ್ ರವರು ವಂದಿಸಿದರು. ವಾಣಿ ಅವರು ಕಾರ್ಯಕ್ರಮ ನಿರೂಪಿಸಿದರು.


ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಪರಿಸರದ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ಶಾಲೆಯ ಸುತ್ತಮುತ್ತ ಶುಚಿಗೊಳಿಸಲಾಯಿತು.

LEAVE A REPLY

Please enter your comment!
Please enter your name here