ಮಾರ್‌ ಇವಾನಿಯೋಸ್‌ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

0

ಕುಂತೂರು: ಇಲ್ಲಿನ ಮಾರ್‌ ಇವಾನಿಯೋಸ್‌ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.
ಕಾಲೇಜಿನ ಸಂಚಾಲಕ ಡಾ| ಎಲ್ದೋ ಪುತ್ತನ್‌ಕಂಡತ್ತಿಲ್‌ ನೇತೃತ್ವದಲ್ಲಿ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕಾಲೇಜಿನ ಆವರಣದೊಳಗಿನ ಸುತ್ತಮುತ್ತಲಿನ ಪ್ರದೇಶದಲ್ಲಿ ವಿವಿಧ ಜಾತಿಯ ಗಿಡಗಳನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನವನ್ನುಆಚರಿಸಲಾಯಿತು.

ಬಿ.ಎಡ್.ಪ್ರಶಿಕ್ಷಣಾರ್ಥಿಗಳು ವಿವಿಧ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಸಂರಕ್ಷಣೆಯ ಕುರಿತು ಜಾಗೃತಿಯನ್ನು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲೆ ಉಷಾ ಎಂ.ಎಲ್ ಮತ್ತು ಉಪನ್ಯಾಸಕ ವರ್ಗದವರು ಹಾಜರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

LEAVE A REPLY

Please enter your comment!
Please enter your name here