ಮಂಗಳೂರು: ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಸಮರ್ಪಕವಾಗಿ ಅನುಷ್ಠಾನಕ್ಕೆ ತಂದಿರುವ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ಗೆ ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ನವದೆಹಲಿ ಇವರು 2022-23ನೇ ಸಾಲಿನ ‘ಎಕ್ಸಂಪಲರಿ ಅವಾರ್ಡ್ ಆಫ್ ಎಕ್ಸೆಲೆನ್ಸ್’ ರಾಷ್ಟ್ರೀಯ ಪ್ರಶಸ್ತಿ ನೀಡಿ ಪುರಸ್ಕರಿಸಿದ್ದಾರೆ.
ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜೂ.7ರಂದು ನವದೆಹಲಿಯಲ್ಲಿ ನಡೆದ ವಾರ್ಷಿಕ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಕೆ. ಇವರು ‘ಎಕ್ಸಂಪಲರಿ ಅವಾರ್ಡ್ ಆಫ್ ಎಕ್ಸೆಲೆನ್ಸ್ ’ರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡರು. ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಹಣಕಾಸು ಸೇವೆಗಳ ಇಲಾಖೆಯ ಕಾರ್ಯದರ್ಶಿ ಡಾ.ವಿವೇಕ್ ಜೋಷಿ ಅವರು ಪ್ರಶಸ್ತಿ ನೀಡಿ ಅಭಿನಂದಿಸಿದರು. ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್‌ಸಿಡಿಸಿಸಿ ಬ್ಯಾಂಕ್ 2019ರ ಜನವರಿ 11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿತ್ತು.ಅದರಂತೆ ಬ್ಯಾಂಕಿನ ಪ್ರತಿ ಶಾಖೆಯಲ್ಲೂ ಅಟಲ್ ಪಿಂಚಣಿ ಯೋಜನೆಗೆ ಪ್ರತಿವರ್ಷ ಚಂದಾದಾರರನ್ನು ನೊಂದಾಯಿಸುವ ಗುರಿಯನ್ನು ನೀಡಲಾಗಿತ್ತು.
ಗಣನೀಯ ಪ್ರಗತಿ:2019-20, 2020-21 ಹಾಗೂ 2021-22ನೇ ಹಣಕಾಸು ವರ್ಷದಲ್ಲಿ ಅಟಲ್ ಪಿಂಚಣಿ ಯೋಜನೆಗೆ ಚಂದಾದಾರರನ್ನು ನೋಂದಾಯಿಸುವಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಗಣನೀಯ ಪ್ರಗತಿಯನ್ನು ಸಾಧಿಸಿದೆ. 2022-23ನೇ ಸಾಲಿನಲ್ಲೂ ಚಂದಾದಾರರನ್ನು ನೋಂದಾಯಿಸುವಲ್ಲಿ ಬ್ಯಾಂಕ್ ದಾಖಲೆ ನಿರ್ಮಿಸಿದೆ. ಒಟ್ಟು 6669 ಎಪಿವೈ ಚಂದಾದಾರರ ನೋಂದಣಿಯೊಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆ ನಿರ್ಮಿಸಿದೆ. ಬ್ಯಾಂಕಿನ ಈ ಕ್ರೀಯಾಶೀಲತೆಯನ್ನು ಗುರುತಿಸಿ ಭಾರತದ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ಅಟಲ್ ಪಿಂಚಣಿ ಯೋಜನೆಯ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಎಸ್‌ಸಿಡಿಸಿಸಿ ಬ್ಯಾಂಕಿಗೆ ನೀಡಿ ಗೌರವಿಸಿದೆ. ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಛೇರ್ ಮೆನ್ ಡಾ.ದೀಪಕ್ ಮೊಹಂತಿ, ಪ್ರಾಧಿಕಾರದ ಸದಸ್ಯೆ ಮಮತಾ ಶಂಕರ್, ಕಾರ್ಯನಿರ್ವಾಹಕ ನಿರ್ದೇಶಕ ಎ.ಜಿ.ದಾಸ್ ಉಪಸ್ಥಿತರಿದ್ದರು.
ಗಣನೀಯ ಪ್ರಗತಿ
2019-20, 2020-21 ಹಾಗೂ 2021-22ನೇ ಹಣಕಾಸು ವರ್ಷದಲ್ಲಿ ಅಟಲ್ ಪಿಂಚಣಿ ಯೋಜನೆಗೆ ಚಂದಾದಾರರನ್ನು ನೋಂದಾಯಿಸುವಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಗಣನೀಯ ಪ್ರಗತಿಯನ್ನು ಸಾಧಿಸಿದೆ. 2022-23ನೇ ಸಾಲಿನಲ್ಲೂ ಚಂದಾದಾರರನ್ನು ನೋಂದಾಯಿಸುವಲ್ಲಿ ಬ್ಯಾಂಕ್ ದಾಖಲೆ ನಿರ್ಮಿಸಿದೆ. ಒಟ್ಟು 6669 ಎಪಿವೈ ಚಂದಾದಾರರ ನೋಂದಣಿಯೊಂದಿಗೆ ಎಸ್‌ಸಿಡಿಸಿಸಿ ಬ್ಯಾಂಕ್ ದಾಖಲೆ ನಿರ್ಮಿಸಿದೆ.