ಪುತ್ತೂರು: ಅಕ್ಷಯ ಕಾಲೇಜಿನಲ್ಲಿ “ಕೃತ್ವ 2k23” ಉದ್ಘಾಟನೆ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ಜೂ.8 ರಂದು ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ UG Level Fest ಕಾರ್ಯಕ್ರಮವು ನಡೆಯಿತು.

ಕಾರ್ಯಕ್ರಮವನ್ನು ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಶ್ರೀಮತಿ ಕಲಾವತಿ ಜಯಂತ್ ದೀಪ ಬೆಳಗಿಸಿ ಉದ್ಘಾಟಿಸಿ, ಟ್ರೋಫಿಗಳನ್ನು ಅನಾವರಣಗೊಳಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕುಳಾಯಿ ಫೌಂಡೇಶನ್ ಸ್ಥಾಪಕಾಧ್ಯಕ್ಷರಾದ ಶ್ರೀಮತಿ ಪ್ರತಿಭಾ ಕುಳಾಯಿ ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಮಹತ್ವವನ್ನು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕಾದ ನೈತಿಕತೆಯನ್ನು ತಿಳಿಹೇಳಿದರು.

ಹಾಗೆಯೇ ಮತ್ತೋರ್ವ ಅತಿಥಿಯಾಗಿದ್ದ ಕೆನರಾ ಬ್ಯಾಂಕ್ ಸಂಪ್ಯ ಶಾಖೆಯ ವ್ಯವಸ್ಥಾಪಕಿಯಾದ ಡಾ. ದೀಪ ಎಸ್. ರಾಜ್ ಇವರು ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಹೆಚ್ಚಿನ ಮಹತ್ವವನ್ನು ನೀಡಲು “ಕೃತ್ವ” ದಂತಹ ಸ್ಪರ್ಧೆಗಳು ಅವಶ್ಯ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶ್ರೀ ಜಯಂತ್ ನುಡುಬೈಲು ಮಾತನಾಡಿ, ಆಗಮಿಸಿದ ಅತಿಥಿಗಳಿಗೆ ಸ್ವಾಗತ ಬಯಸಿ, ಸ್ಪರ್ಧೆಗಳಿಗೆ ಆಗಮಿಸಿದ ಎಲ್ಲಾ ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಸಮಾರಂಭದಲ್ಲಿ ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕೃತ್ವ ಫೆಸ್ಟ್ನ ಸಂಯೋಜಕರಾದ ರಕ್ಷಣ ಟಿ.ಆರ್, ವಿದ್ಯಾರ್ಥಿ ಸಂಯೋಜಕರಾದ ಗಗನ್‌ದೀಪ್ ಹಾಗೂ ಪ್ರಣಮ್ಯ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಗವರ್ನಿಂಗ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ದಕ್ಷಿತಾ ಸ್ವಾಗತಿಸಿ, ಪ್ರಗತಿ ಕೆ ವಂದಿಸಿದರು. ಅಕ್ಷಯ ವಿದ್ಯಾರ್ಥಿ ಬಳಗ ಪ್ರಾರ್ಥಿಸಿ, ಕಾರ್ಯಕ್ರಮವನ್ನು ಅನ್ನಪೂರ್ಣ ನಿರೂಪಿಸಿದರು.

LEAVE A REPLY

Please enter your comment!
Please enter your name here