ಬಿ.ಎಸ್.ಯಡಿಯೂರಪ್ಪ ಸೇರಿ ಬಿಜೆಪಿ ರಾಜ್ಯ ಮುಖಂಡರ ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ

0

ಕಾಣಿಯೂರು : ಸುಳ್ಯ ಶಾಸಕಿ‌ ಭಾಗೀರಥಿ ಮುರುಳ್ಯ ಇಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಬಿಜೆಪಿ ಮುಖಂಡರನ್ನು ಭೇಟಿ ಮಾಡಿ‌ ಮಾತುಕತೆ ನಡೆಸಿದರು.

ಬೆಂಗಳೂರಿಗೆ ತೆರಳಿದ ಭಾಗೀರಥಿ‌ ಮುರುಳ್ಯ ಪಕ್ಷದ ಸಭೆಯಲ್ಲಿ ಭಾಗಹವಹಿಸಿದರು‌. ಸುಳ್ಯ ಕ್ಷೇತ್ರದ ನೂತನ ಶಾಸಕರಾಗಿ ಆಯ್ಕೆಯಾದ ಭಾಗೀರಥಿ ಮುರುಳ್ಯ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಬಸವರಾಜ್ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮತ್ತಿತರರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here