ಹೆಚ್ಚುವರಿ ಬಸ್, ಚಾಲನಾ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿ ನೇಮಕ ಮಾಡುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿಗೆ ಶಾಸಕ ಅಶೋಕ್ ಕುಮಾರ್ ರೈ ಮನವಿ

0

ಪುತ್ತೂರು; ಕೆ ಎಸ್‌ ಆರ್‌ ಟಿ ಸಿ ಪುತ್ತೂರು ಡಿಪೋಗೆ ಹೆಚ್ಚುವರಿ ಬಸ್ಸು, ಚಾಲನೆ ಮತ್ತು ತಾಂತ್ರಿಕ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ರಾಜ್ಯ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.


ಬೆಂಗಳೂರಿನಲ್ಲಿರುವ ಸಚಿವರ ಕಚೇರಿಗೆ ತೆರಳಿದ ಶಾಸಕರು ಈ ಹಿಂದೆ ಪುತ್ತೂರು ಘಟಕ ವ್ಯಾಪ್ತಿಯಲ್ಲಿ ಸರಕಾರಿ ಬಸ್ಸುಗಳ ಕೊರತೆ ಇರಲಿಲ್ಲ ಇದರಿಂದ ಗ್ರಾಮೀಣ ಭಾಗದ ಜನರಿಗೆ, ವಿದ್ಯಾರ್ಥಿಗಳಿಗೆ ಮತ್ತು ಕಾರ್ಮಿಕರಿಗೆ ತುಂಬಾ ಪ್ರಯೋಜನವಾಗುತ್ತಿತ್ತು ಆದರೆ ಕೋವಿಡ್ ಲಾಕ್‌ಡೌನ್ ನಂತರ ಬಸ್ಸುಗಳ ಓಡಾಟವನ್ನು ಕಡಿತಗೊಳಿಸಿರುವ ಕಾರಣ ಗ್ರಾಮೀಣ ಭಾಗದಲ್ಲಿ ಬಸ್ಸುಗಳ ಕೊರತೆ ಇದೆ. ಪುತ್ತೂರು ವಿಧಾನಸಭಾ ವ್ಯಾಪ್ತಿಯ ಬಹುತೇಕ ಗ್ರಾಮೀಣ ಭಾಗಗಳಲ್ಲಿ ಬಸ್ಸುಗಳ ಕೊರತೆಯಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದೆ. ಬಸ್ಸುಗಳಲ್ಲಿ ಚಾಲನಾ ಸಿಬ್ಬಂದಿ ಮತ್ತು ತಾಂತ್ರಿಕ ಸಿಬ್ಬಂದಿಗಳ ಕೊರತೆಯೂ ಇದ್ದು . ಹೆಚ್ಚಿನ ಚಾಲಕರು ಮತ್ತು ಸಿಬ್ಬಂದಿಗಳು ವರ್ಗಾವಣೆಯಾಗಿ ಬೇರೆಡೆಗೆ ತೆರಳಿದ್ದು ಇದರಿಂದಾಗಿ ಪುತ್ತೂರು ಡಿಪೋದಲ್ಲಿ ತೀವ್ರತರದ ಆಡಳಿತಾತ್ಮಕ ಸಮಸ್ಯೆಗಳು ಉಂಟಾಗಿದ್ದು . ಪುತ್ತೂರು ಡಿಪೋಗೆ ಸಲ್ಲಿಸಲಾಗಿದ್ದ ಬೇಡಿಕೆಯನ್ನು ಪರಿಗಣಿಸಿ ಸಮಸ್ಯೆಯನ್ನು ಬಗೆಹರಿಸುವಂತೆ ಸಚಿವರಿಗೆ ಶಾಸಕರು ಮನವಿ ಮಾಡಿದ್ದಾರೆ. ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರಿಗೂ ಶಾಸಕರು ಮನವಿ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here