ಪುತ್ತೂರು: ಗೌರಿ ಹಬ್ಬದ ದಿನದಂದು ಹೊಸತೆನೆ ವಿತರಣೆಗಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮೂಲ ನಾಗನ ಸನ್ನಿಧಿಯ ಎದುರು ಭತ್ತದ ಸಸಿ ನಾಟಿ ಮುಹೂರ್ತ ಜೂ.9ರಂದು ನಡೆಯಿತು.
ದೇವಳದ ಪ್ರಧಾನ ಅರ್ಚಕರಾಗಿರುವ ವ್ಯವಸ್ಥಾಪನಾ ಸಮಿತಿ ಸದಸ್ಯ ವೇ.ಮೂ ವಿ ಎಸ್ ಭಟ್ ಅವರು ಮುಹೂರ್ತ ಕಾರ್ಯಕ್ರಮ ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ಬಿ ಕೆ ವೀಣಾ, ಬಿ ಐತ್ತಪ್ಪ ನಾಯ್ಕ್, ರಾಮದಾಸ್ ಗೌಡ, ರಾಮಚಂದ್ರ ಕಾಮತ್, ರವೀಂದ್ರನಾಥ ರೈ ಬಳ್ಳಮಜಲು, ಕಾರ್ಯ ನಿರ್ವಹಣಾಧಿಕಾರಿ ಶ್ರೀನಿವಾಸ್, ಕಚೇರಿ ವ್ಯವಸ್ಥಾಪಕ ಹರೀಶ್ ಶೆಟ್ಟಿ, ಭತ್ತದ ನಾಟಿ ಉಸ್ತುವಾರಿ ವಹಿಸಿಕೊಂಡ ಸುದೇಶ್ ಕುಮಾರ್ ಚಿಕ್ಕಪುತ್ತೂರು, ರತ್ನಾಕರ ನಾಯ್ಕ್, ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.