ಮುಂಡೂರು ಸ.ಉ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ

0

ಪೋಷಕರು ಹಾಗೂ ಶಿಕ್ಷಕ ವೃಂದ ಒಗ್ಗಟ್ಟಿನಿಂದ ಕರ್ತವ್ಯ ನಿರ್ವಹಿಸಿದಾಗ ಯಾವುದೇ ಕಾರ್ಯವನ್ನೂ ಯಶಸ್ವಿಯಾಗಿ ಮಾಡಬಹುದು ಎಂಬುವುದಕ್ಕೆ ಮುಂಡೂರು ಶಾಲೆ ನಿದರ್ಶನ-ರಮೇಶ್ ಗೌಡ ಪಜಿಮಣ್ಣು

ಪುತ್ತೂರು: ಪೋಷಕರು ಹಾಗೂ ಶಿಕ್ಷಕ ವೃಂದ ಜೊತೆಗೂಡಿ ಸಮಾನ ಮನಸ್ಸಿನಿಂದ ಕರ್ತವ್ಯ ನಿರ್ವಹಿಸಿದಾಗ ಯಾವುದೇ ಕಾರ್ಯ ಇದ್ದರೂ ಅತ್ಯಂತ ಯಶಸ್ವಿಯಾಗಿ ಮಾಡಬಹುದು ಎಂಬುವುದಕ್ಕೆ ನಮ್ಮ ಮುಂಡೂರು ಶಾಲೆ ಸೂಕ್ತ ನಿದರ್ಶನ ಎಂದು ಮುಂಡೂರು ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ರಮೇಶ್ ಗೌಡ ಪಜಿಮಣ್ಣು ಹೇಳಿದರು. ಮುಂಡೂರು ಸ.ಉ.ಹಿ.ಪ್ರಾ.ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


ಮುಂಡೂರು ಗ್ರಾ.ಪಂ ಸದಸ್ಯ ಉಮೇಶ್ ಗೌಡ ಅಂಬಟ ದೀಪ ಪ್ರಜ್ವಲನದ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬೇಸಿಗೆ ಶಿಬಿರ ಹಾಗೂ ಉಚಿತ ವಾಲಿಬಾಲ್ ತರಬೇತಿ ಕಾರ್ಯಗಾರದಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿ ಇದಕ್ಕೆ ಸಹಕರಿಸಿದ ನವೀನ್ ರೈ ಹಾಗೂ ಶಿವ ಸುಬ್ರಹ್ಮಣ್ಯ ಅವರನ್ನು ಅಭಿನಂದಿಸಲಾಯಿತು.


ಸರಕಾರದ ವತಿಯಿಂದ ನೀಡಲ್ಪಡುವ ಉಚಿತ ಸಮವಸ್ತ್ರ ಹಾಗೂ ಪಠ್ಯಪುಸ್ತಕಗಳನ್ನು ಮಕ್ಕಳಿಗೆ ವಿತರಿಸಲಾಯಿತು. ಶಾಲೆಗೆ ಭೇಟಿ ನೀಡಿದ ಮುರಳಿಧರ ಆಚಾರ್ಯ ಕಲ್ಲರ್ಪೆ ಇವರು ಶಾಲೆಗೆ ೫೦ ಊಟದ ತಟ್ಟೆ ಹಾಗೂ ಲೋಟಗಳನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಅವರನ್ನು ಗೌರವಿಸಲಾಯಿತು.


ಪ್ರಾರಂಭದಲ್ಲಿ ಹೊಸದಾಗಿ ದಾಖಲಾದ ವಿದ್ಯಾರ್ಥಿಗಳನ್ನು ಬ್ಯಾಂಡ್ ಸೆಟ್ ಹಾಗೂ ಹೂ ಮಳೆಯೊಂದಿಗೆ ಶಾಲಾ ಆವರಣಕ್ಕೆ ಆತ್ಮೀಯವಾಗಿ ಸ್ವಾಗತಿಸಲಾಯಿತು.ಶಾಲಾ ಮುಖ್ಯ ಗುರು ವಿಜಯ ಪಿ ಪ್ರಾಸ್ತಾವಿಕ ನುಡಿಗಳ ಮೂಲಕ ಸ್ವಾಗತಿಸಿದರು. ಜಿಪಿಟಿ ಶಿಕ್ಷಕಿ ಸಂಧ್ಯಾ ವಂದಿಸಿದರು. ಶಾಲಾ ಟಿಜಿಟಿ ಶಿಕ್ಷಕ ರವೀಂದ್ರ ಶಾಸ್ತ್ರಿ ಕಾರ್ಯಕ್ರಮ ನಿರೂಪಿಸಿದರು ಶಿಕ್ಷಕ ವೃಂದದವರು ಸಹಕರಿಸಿದರು. ಮಕ್ಕಳಿಗೆ ಪಾಯಸ ಹಪ್ಪಳ ಹಾಗೂ ಪಲ್ಯದ ಜೊತೆಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಯಿತು.

LEAVE A REPLY

Please enter your comment!
Please enter your name here