ಪುತ್ತೂರು:ಹಾಲಿ ಗ್ರಾಮ ಪಂಚಾಯಿತಿಗಳಲ್ಲಿ ಅಧ್ಯಕ್ಷ, ಉಪಾಧ್ಯಕ್ಷರ ಅಧಿಕಾರ ಆಗಸ್ಟ್‌ಗೆ ಪೂರ್ಣವಾಗುತ್ತಿರುವ ಕಾರಣ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ರಾಜ್ಯ ಚುನಾವಣಾ ನಿರ್ದೇಶನದಂತೆ ಮೀಸಲಾತಿ ನಿಗದಿಯಾಗಲಿದ್ದು ಜೂ.16ರಂದು ಗ್ರಾಮ ಪಂಚಾಯತ್ ಸದಸ್ಯರ ಸಮ್ಮುಖದಲ್ಲಿ ಮೀಸಲಾತಿ ನಿಗದಿಯಾಗಲಿದೆ. ಪುತ್ತೂರು ಪುರಭವನದಲ್ಲಿ ಮೀಸಲಾತಿ ನಿಗದಿ ಪ್ರಕ್ರಿಯೆ ಸಭೆ ನಡೆಯಲಿದೆ.
ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿ ಸದಸ್ಯರ ಸಮ್ಮುಖದಲ್ಲಿ ನಿಗದಿಪಡಿಸಬೇಕಾಗಿರುವುದರಿಂದ ಬೆಳಗ್ಗೆ 10:30ಕ್ಕೆ ಪುತ್ತೂರು ಪುರಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ತಾಲೂಕು ವ್ಯಾಪ್ತಿಯ ಎಲ್ಲಾ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಹಾಗೂ ಅವಧಿ ಮುಕ್ತಾಯಗೊಳ್ಳಲಿರುವ ಗ್ರಾಮ ಪಂಚಾಯತಿಗಳ ಚುನಾಯಿತ ಅಧ್ಯಕ್ಷ, ಉಪಾಧ್ಯಕ್ಷರು ಭಾಗವಹಿಸುವಂತೆ ಸೂಚಿಸಲಾಗಿದೆ. ಈಗಾಗಲೇ ಎಲ್ಲಾ ಪಂಚಾಯತ್‌ಗಳ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರಿಗೆ ಈ ಕುರಿತು ನೋಟೀಸ್ ನೀಡಲಾಗಿದೆ ಎಂದು ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಹೆಚ್ ಅವರು ಮಾಹಿತಿ ನೀಡಿದ್ದಾರೆ.