ಪುತ್ತೂರು: ಮಳೆಗಾಲದಲ್ಲಿ ಸಂಭವಿಸಬಹುದಾದ ಹಾನಿಗಳನ್ನು ತಡೆಯುವ ನಿಟ್ಟಿನಲ್ಲಿ ಮುಂದಡಿಯಿಟ್ಟಿರುವ ಮೆಸ್ಕಾಂ ಜೂ.9ರಂದು ನಗರ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿಯ ಮೇಲಿದ್ದ ಅಪಾಯಕಾರಿ ಮರಗ ಕೊಂಬೆಗಳನ್ನು ತೆರವುಗೊಳಿಸಿದರು.
ಬನ್ನೂರಿನಿಂದ ಪ್ರಾರಂಭಿಸಿ ಉಪ್ಪಿನಂಗಡಿ ಮುಖ್ಯ ರಸ್ತೆಯ ಇಕ್ಕೆಲಗಳಲ್ಲಿ ವಿದ್ಯುತ್ ತಂತಿಯ ಮೇಲಿದ್ದ ಅಪಾಯಕಾರಿ ಸ್ಥಿತಿಯಲ್ಲಿದ್ದ ಮರಗಳ ಕೊಂಬೆಗಳನ್ನು ಕ್ರೇನ್ ಮೂಲಕ ತೆರವುಗೊಳಿಸಿದರು. ಬನ್ನೂರಿನಿಂದ ದಾರಂದಕುಕ್ಕು ತನಕದ ಸುಮಾರು ಕಿ.ಮೀ ದೂರದ ತನಕ ರಸ್ತೆಯ ಇಕ್ಕೆಲಗಳಲ್ಲಿದ್ದ ಕೊಂಬೆಗಳನ್ನು ತೆರವುಗೊಳಿಸಿದರು. ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ., ಸಹಾಯಕ ಇಂಜಿನಿಯರ್ ರಾಜೇಶ್ ಹಾಗೂ ಸಿಬಂದಿಗಳು ತೆರವು ಕಾರ್ಯಾಚರಣೆಯಲ್ಲಿ ಸಹಕರಿಸಿದರು.