ಕಾಣಿಯೂರು: ಪುಣ್ಚತ್ತಾರು ವಿಷ್ಣುಪುರ ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ, ಶ್ರೀ ಕಾಳಿಕಾಂಬ ದೇವಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೈವ, ಶ್ರೀ ಕಾಳಿಕಾಂಬ ದೇವಿ ಮತ್ತು ಪರಿವಾರ ದೈವಗಳ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಕೆಮ್ಮಿಂಜೆ ಬ್ರಹ್ಮಶ್ರೀ ವೇದಮೂರ್ತಿ ತಂತ್ರಿ ಸುಬ್ರಹ್ಮಣ್ಯ ಬಳ್ಳಕ್ಕುರಾಯರ ನೇತೃತ್ವದಲ್ಲಿ ಜೂ11 ರಿಂದ ಜೂ13ರವರೆಗೆ ನಡೆಯಲಿದೆ.
ಜೂ.11ರಂದು ಬೆಳಿಗ್ಗೆ ಹೊರೆಕಾಣಿಕೆ ಸಂಗ್ರಹ ಮಾಡಿ, ಸಂಜೆ ಕಾಣಿಯೂರು ಶ್ರೀ ಅಮ್ಮನವರ ದೇವಸ್ಥಾನದಿಂದ ಪುಣ್ಚತ್ತಾರು ಕರಿಮಜಲು ದೈವಸ್ಥಾನದವರೆಗೆ ಶ್ರೀ ವಿಷ್ಣುಮೂರ್ತಿ ದೈವದ ಬೆಳ್ಳಿಯ ಮೊಗ ಮತ್ತು ಹಸಿರು ಹೊರೆಕಾಣಿಕೆಯ ಮೆರವಣಿಗೆ ನಡೆಯಲಿದೆ, ಈ ಸಂದರ್ಭದಲ್ಲಿ ಶ್ರೀ ಸುಬ್ರಹ್ಮಣ್ಯ ಭಜನಾ ಮಂಡಳಿ ನಾವೂರು ಮತ್ತು ಶ್ರೀ ಹರಿ ಭಜನಾ ಮಂಡಳಿ ಪುಣ್ಚತ್ತಾರು ಇವರಿಂದ ಪುಣ್ಚತ್ತಾರಿನಿಂದ ದೈವಸ್ಥಾನದವರೆಗೆ ಕುಣಿತಾ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ತಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ, ಪ್ರಾಸಾದ ಪರಿಗ್ರಹ, ಪ್ರಾರ್ಥಣೆ, ಸ್ಥಳಶುದ್ಧಿ, ಪ್ರಾಸಾದಶುದ್ಧಿ, ರಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತುಬಲಿ, ಬಿಂಬಾಧಿವಾಸ, ದಿಕ್ಬಾಲಬಲಿ, ಅನ್ನಸಂತರ್ಪಣೆ ನಡೆಯಲಿದೆ.
ಜೂ 12ರಂದು ಬೆಳಿಗ್ಗೆ ಗಣಹೋಮ ಕಲಶಪೂಜೆ, ಬೆಳಿಗ್ಗೆ ಗಂಟೆ ೯-೦೨ಕ್ಕೆ ನಡೆಯುವ ಮಿಥುನ ಲಗ್ನದ ಶುಭ ಮುಹೂರ್ತದಲ್ಲಿ ಪ್ರತಿಷ್ಠೆ, ಕಲಶಾಭಿಷೇಕ, ತಂಬಿಲ ಸೇವೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಶ್ರೀ ವಿಷ್ಣುಮೂರ್ತಿ ದೈವದ ಭಂಡಾರ ತೆಗೆಯುವುದು. ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಕಡಬ ತಾಲೂಕಿನ ಕಾರ್ಯದರ್ಶಿ ಸದಾನಂದ ಆಚಾರ್ಯ ಕಾಣಿಯೂರು ಇವರು ತರಬೇತುಗೊಳಿಸಿದ ತಂಡದಿಂದ ಕುಣಿತ ಭಜನಾ ಕಾರ್ಯಕ್ರಮ, ರಾತ್ರಿ ಅನ್ನಸಂತರ್ಪಣೆ, ಬಳಿಕ ನಕ್ಷತ್ರ ನೃತ್ಯ ಕಲಾತಂಡ ದೇವಿನಗರ ಆಲಂಕಾರು ಇವರು ಪ್ರಸ್ತುತ ಪಡಿಸುವ “ಪುಣ್ಚತ್ತಾರು ನಾಟ್ಯಗಾನ ವೈಭವ ನಡೆಯಲಿದೆ. ಶ್ರೀ ವಿಷ್ಣುಮೂರ್ತಿ ದೈವದ ಕುಳಿಚ್ಚಾಟ, ರಾತ್ರಿ ವಿವಿಧ ಸಾಂಸ್ಕೃತಿಕ ಕಾಯಾಕ್ರಮ ನಡೆಯಲಿದೆ.
ಜೂ 13 ರಂದು ಬೆಳಿಗ್ಗೆ ಶ್ರೀ ವಿಷ್ಣುಮೂರ್ತಿ ದೈವದ ಬಯಲು ಕೋಲ, ಮಾರಿಕಳ, ಮಧ್ಯಾಹ್ನ ಗುಳಿಗ ಕೋಲ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ ಎಂದು ಕ್ಷೇತ್ರದ ಮೊಕ್ತೇಸರರಾದ ವೆಂಕಟ್ರಮಣ ಆಚಾರ್ಯ ಕರಿಮಜಲು, ಜನಾರ್ದನ ಆಚಾರ್ಯ ಕರಿಮಜಲು, ಕೃಷ್ಣ ಆಚಾರ್ಯ ಕರಿಮಜಲು, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಕಾನತ್ತೂರ್, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶೇಷಪ್ಪ ಗೌಡ ಬೆದ್ರಂಗಳ ಹಾಗೂ ಪದಾಧಿಕಾರಿಗಳು ತಿಳಿಸಿದ್ದಾರೆ.