ಜೂ.20ರೊಳಗೆ ಪಿಂಚಣಿ ಫಲಾನುಭವಿಗಳು ಉಳಿತಾಯ ಖಾತೆಗೆ ಆಧಾರ್ ನಂಬರ್ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್ ಮಾಡುವಂತೆ ತಹಶೀಲ್ದಾರ್ ಸೂಚನೆ

0

ಪುತ್ತೂರು: ಸಾಮಾಜಿಕ ಭದ್ರತಾ ಯೋಜನೆಯಡಿ ಪಡೆಯುವ ಪಿಂಚಣಿಗಳಾದ ವೃದ್ದಾಪ್ಯ ವೇತನ, ಸಂಧ್ಯಾಸುರಕ್ಷಾ ವೇತನ, ಅಂಗವಿಕಲ ವೇತನ, ವಿಧವಾ ವೇತನ, ಮನಸ್ವಿನಿ ವೇತನ, ಎಂಡೋಸಲ್ಫಾನ್ ಮಿತವೇತನ ಪಿಂಚಣಿ ಪಡೆಯುವ ಫಲಾನುಭವಿಗಳು ಜೂ.20ರೊಳಗೆ ತಮ್ಮ ಉಳಿತಾಯ ಖಾತೆಗೆ ಆಧಾರ್ ನಂಬರ್ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್ ಮಾಡಬೇಕು. ಪಿಂಚಣಿ ಜಮೆಯಾಗುತ್ತಿರುವ ಬ್ಯಾಂಕ್/ಪೋಸ್ಟ್ ಆಫೀಸ್ ಉಳಿತಾಯ ಖಾತೆಗೆ ಆಧಾರ್ ಜೋಡಣೆಯಾಗದಿರುವ ಪ್ರಕರಣಗಳ ಪಟ್ಟಿಯನ್ನು ಗ್ರಾಮದ ವ್ಯಾಪ್ತಿಗೆ ಬರುವ ಗ್ರಾಮ ಆಡಳಿತ ಅಧಿಕಾರಿಯವರಿಗೆ ನೀಡಲಾಗಿದೆ. ಸಂಬಂಧಪಟ್ಟ ಗ್ರಾಮ ಆಡಳಿತ ಅಧಿಕಾರಿಯವರ ಕಚೇರಿಗೆ ಭೇಟಿ ನೀಡಿ ಸದ್ರಿ ಪಟ್ಟಿಯನ್ನು ಪರಿಶೀಲಿಸಿಕೊಂಡು ಜೂ.26ರೊಳಗೆ ಸಂಬಂಧಪಟ್ಟ ಬ್ಯಾಂಕ್/ಪೋಸ್ಟ್ ಆಫೀಸ್‌ಗೆ ತೆರಳಿ ಉಳಿತಾಯ ಖಾತೆಗೆ ಆಧಾರ್ ನಂಬರ್ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್ ಮಾಡಬೇಕೆಂದು ತಹಶೀಲ್ದಾರ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here