ಶ್ರೀ. ಕ್ಷೇ.ಧ.ಗ್ರಾ.ಯೋ.ಯ ಜನಜಾಗೃತಿ ವೇದಿಕೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕಡಬ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಇದರ ವತಿಯಿಂದ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ಇದರ ನೂತನ ಪದಗ್ರಹಣ ಸಮಾರಂಭ, ಸಾಮೂಹಿಕ ಸತ್ಯನಾರಾಯಣ ಪೂಜೆ, ನವಜೀವನೋತ್ಸವ ಕಾರ್ಯಕ್ರಮವು ಜೂನ್ 21 ರಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನ ದ ಸಭಾಭವನದಲ್ಲಿ ನಡೆಯಲಿದೆ.

ಇದರ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಜೂ.9ರಂದು ನಡೆಯಿತು. ಕಾರ್ಯಕ್ರಮದಲ್ಲಿ ಕಡಬ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ನ್ಯಾಯವಾದಿ ಮಹೇಶ್ ಕೆ ಸವಣೂರು, ಕಡಬ ಶ್ರೀ ದುರ್ಗಾಂಬಿಕಾ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸೀತಾರಾಮ ಗೌಡ ಪೊಸವೊಳಿಕೆ, ಕಡಬ ಕೇಂದ್ರ ಒಕ್ಕೂಟ ಅಧ್ಯಕ್ಷ ಸಂತೋಷ್ ಕೆ, ಯೋಜನಾಧಿಕಾರಿ ಮೇದಪ್ಪ ನಾವೂರು, ಗೋಳಿತೊಟ್ಟು ಜನಜಾಗೃತಿ ವೇದಿಕೆಯ ಅಧ್ಯಕ್ಷ ನೋಣಯ್ಯ ಪೂಜಾರಿ, ಆಲಂಕಾರು ಜನಜಾಗೃತಿ ವೇದಿಕೆ ಅಧ್ಯಕ್ಷ ಇಂದು ಶೇಖರ ಶೆಟ್ಟಿ, ಕಡಬ ವಲಯದ ಅಧ್ಯಕ್ಷ ರಮೇಶ್ ರೈ, ಹಾಗೂ ಕಡಬ ತಾಲೂಕು ಯೋಜನೆಯ ಮೇಲ್ವಿಚಾರಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here