ಫಿಲೋಮಿನಾ ಗಣಪನಿಗೆ 41ನೇ ವರ್ಷದ ಸಂಭ್ರಮ-ಜೂ.18 ರಂದು ಪೂರ್ವಭಾವಿ ಸಭೆ

0

ಪುತ್ತೂರು: ಸಂತ ಫಿಲೋಮಿನಾ ಕಾಲೇಜು ಹಿರಿಯ ವಿದ್ಯಾರ್ಥಿ ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಹಾಗೂ ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಗಣೇಶೋತ್ಸವ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ದರ್ಬೆ ವಿನಾಯಕ ನಗರದಲ್ಲಿ ಜರಗಲಿರುವ ಎರಡು ದಿನಗಳ 41ನೇ ವರ್ಷದ ಶ್ರೀ ಗಣೇಶೋತ್ಸವದ ಪೂರ್ವಭಾವಿ ಸಭೆಯು ಜೂ.18 ರಂದು ಅಪರಾಹ್ನ ಮುಕ್ರಂಪಾಡಿ ಸುಭದ್ರ ಕಲ್ಯಾಣ ಮಂಟದಲ್ಲಿ ಜರಗಲಿದೆ.
ಈ ಸಂದರ್ಭದಲ್ಲಿ ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಹಿರಿಯ ವಿದ್ಯಾರ್ಥಿಗಳು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಸೂಕ್ತ ಸಲಹೆ ನೀಡಬೇಕಾಗಿ ಸಂತ ಫಿಲೋಮಿನಾ ಕಾಲೇಜು ಶ್ರೀ ಗಣೇಶೋತ್ಸವ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಮುಕ್ರಂಪಾಡಿರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here