ಜೂ‌13: ಬನ್ನೂರು ಚರ್ಚ್‌ನಲ್ಲಿ ಸಂತ ಅಂತೋನಿಯವರ ವಾರ್ಷಿಕ ಮಹೋತ್ಸವ

0

ಪುತ್ತೂರು: ಪವಾಡ ಪುರುಷ ಸಂತರಾದ ಸಂತ ಅಂತೋನಿಯವರು ಜೂ.13ರಂದು ಇಹಲೋಕವನ್ನು ತ್ಯಜಿಸಿ ಸ್ವರ್ಗಕ್ಕೇರಿದ ದಿನವನ್ನು ಬನ್ನೂರು ಸಂತ ಅಂತೋನಿ ಚರ್ಚ್‌ನಲ್ಲಿ ಪ್ರತಿ ವರ್ಷ ವಾರ್ಷಿಕ ಹಬ್ಬವಾಗಿ ಆಚರಿಸಲಾಗುತ್ತಿದೆ.


ಆ ಪ್ರಯುಕ್ತ ಚರ್ಚ್‌ನಲ್ಲಿ ಮೇ 31ರಿಂದ ಜೂ. 12ರ ತನಕ 13 ದಿನಗಳ ಭಕ್ತಾಧಿಗಳ ಬೇಡಿಕೆ, ಹರಕೆಗಳ ವಿಶೇಷ ಪ್ರಾರ್ಥನೆ(ನವೇನಾ)ಯು ಜರಗಿತ್ತು. ವಾರ್ಷಿಕ ಮಹೋತ್ಸವದ ದಿವ್ಯ ಬಲಿಪೂಜೆಯನ್ನು ಮಂಗಳೂರಿನ ದೆರೆಬೈಲ್ ಚರ್ಚ್ ಧರ್ಮಗುರು ವಂ|ಜೋಸೆಫ್ ಮಾರ್ಟಿಸ್ ರವರು ನೆರವೇರಿಸಲಿದ್ದಾರೆ. ಪುತ್ತೂರು ವಲಯದ ಪ್ರಧಾನ ಧರ್ಮಗುರು ಹಾಗೂ ಮಾಯಿದೆ ದೇವುಸ್ ಚರ್ಚ್‌ನ ಪ್ರಧಾನ ಧರ್ಮಗುರು ಆಗಿರುವ ವಂ|ಲಾರೆನ್ಸ್ ಮಸ್ಕರೇನ್ಹಸ್, ಸಹಾಯಕ ಧರ್ಮಗುರು ವಂ|ಲೋಹಿತ್ ಅಜಯ್ ಮಸ್ಕರೇನ್ಹಸ್, ಮರೀಲ್ ಸೆಕ್ರೇಡ್ ಹಾರ್ಟ್ ಚರ್ಚ್‌ನ ಧರ್ಮಗುರು ವಂ|ವಲೇರಿಯನ್ ಫ್ರ್ಯಾಂಕ್, ಪುತ್ತೂರು ವಲಯ ಚರ್ಚ್ ಗಳ ಧರ್ಮಗುರುಗಳು, ಫ್ರಾನ್ಸಿಸ್ಕನ್ ಸಭೆಯ ಧರ್ಮಗುರುಗಳು ದಿವ್ಯ ಬಲಿಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಚರ್ಚ್‌ನ ಧರ್ಮಗುರು ವಂ|ಬಾಲ್ತಜಾರ್ ಪಿಂಟೋ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ತೋಮಸ್ ಫೆರ್ನಾಂಡೀಸ್, ಕಾರ್ಯದರ್ಶಿ ಜೋಯ್ಸ್ ಡಿ’ಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here