ನಾಳೆ(ಜೂ.13) ವಿದ್ಯುತ್ ನಿಲುಗಡೆ

0

ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಟೌನ್ ಹಿಲ್ಸ್ & ದರ್ಬೆ ಫೀಡರ್‌ನಲ್ಲಿ ಜೂ.13ರಂದು (ಮಂಗಳವಾರ) ಪೂರ್ವಾಹ್ನ 10ರಿಂದ ಅಪರಾಹ್ನ 1ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 110/33/11 ಕೆ.ವಿ ಪುತ್ತೂರು ವಿದ್ಯುತ್ ಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ನಗರಸಭಾ ವ್ಯಾಪ್ತಿ (ಪುತ್ತೂರು ಪೇಟೆ)ಯ ವಿದ್ಯುತ್ ಬಳಕೆದಾರರು ಸಹಕರಿಸಬೇಕು.

33ಕೆವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆ.ವಿ ಮಾಡಾವು-ಬೆಳ್ಳಾರೆ ವಿದ್ಯುತ್ ಮಾರ್ಗದ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.13ರಂದು(ಮಂಗಳವಾರ) ಪೂರ್ವಾಹ್ನ 10 ರಿಂದ ಸಾಯಂಕಾಲ 5ರವರೆಗೆ 33ಕೆ.ವಿ ಮಾಡಾವು-ಬೆಳ್ಳಾರೆ-ಗುತ್ತಿಗಾರು-ಸುಬ್ರಹ್ಮಣ್ಯ ಮತ್ತು 33ಕೆ.ವಿ ಮಾಡಾವು-ಬೆಳ್ಳಾರೆ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 33/11ಕೆವಿ ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಸಹಕರಿಸಬೇಕೆಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here