ಪುತ್ತೂರು: ಅಕ್ಷಯ ಕಾಲೇಜಿನಲ್ಲಿ ʼಅಕ್ಷಯ ವೈಭವ 2k23ʼ

0

ಪುತ್ತೂರು: ಅಕ್ಷಯ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್(ರಿ) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಸಂಪ್ಯ ಅಕ್ಷಯ ಕಾಲೇಜಿನಲ್ಲಿ ದಿನಾಂಕ ಜೂ.10 ರಂದು ‘ಅಕ್ಷಯ ವೈಭವ’ ವಾರ್ಷಿಕೋತ್ಸವ ನಡೆಯಿತು.

ಕಾರ್ಯಕ್ರಮವನ್ನು ಮಂಗಳೂರು ವಿ.ವಿ ಉಪಕುಲಪತಿಗಳಾದ ಡಾ. ಜಯರಾಜ್ ಅಮೀನ್ ದೀಪ ಬೆಳಗಿಸಿ ಉದ್ಘಾಟಿಸಿ, ‘ಅತೀ ಕಡಿಮೆ ಸಮಯದಲ್ಲಿ ವೃತ್ತಿಪರ ಕೋರ್ಸ್ ನೊಂದಿಗೆ ಕಾಲೇಜು ಪ್ರಾರಂಭಿಸಿ, ವಿ.ವಿ, ರಾಷ್ಟ್ರ-ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ಸಾಂಸ್ಕೃತಿಕ ಹಾಗೂ ಕ್ರೀಡಾಕ್ಷೇತ್ರದಲ್ಲಿ ವಿದ್ಯಾರ್ಥಿಗಳು ಮಾಡಿರುವ ಸಾಧನೆ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿದೆ. ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಯೊಂದಿಗೆ ಜೀವನಕ್ಕೆ ಬೇಕಾದ ಕೌಶಲ್ಯ ನೀಡುವಲ್ಲಿ ಅಕ್ಷಯದಂತಹ ಸಂಸ್ಥೆಯ ಅವಶ್ಯಕತೆಯಿದೆ. ವಿದ್ಯಾರ್ಥಿಗಳಿಗೆ ಹೆತ್ತವರ ಕೊಡುಗೆಯಷ್ಟೇ ಶಿಕ್ಷಕರ ಕೊಡುಗೆಯೂ ಅವಶ್ಯವಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಮಾತನಾಡಿ, ‘ಸ್ವ ಇಚ್ಛೆಯ ಮೇರೆಗೆ ಕೋರ್ಸ್ ಗಳನ್ನು ಆಯ್ಕೆಮಾಡಿಕೊಂಡಿರುವ ನಿಮ್ಮ ಮುಂದಿನ ಭವಿಷ್ಯ ಉಜ್ವಲವಾಗಿರಲಿ’ ಎಂದು ಶುಭಹಾರೈಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಕ್ಷಯ ಕಾಲೇಜಿನ ಅಧ್ಯಕ್ಷರಾದ ಜಯಂತ್ ನಡುಬೈಲು ಮಾತನಾಡಿ, ವಾರ್ಷಿಕೋತ್ಸವ ಎಂಬುದು ಎಲ್ಲಾ ಜಾತಿ, ಧರ್ಮ, ಭಾಷೆ ಎಲ್ಲಕ್ಕಿಂತ ಮೀರಿದ ಹಬ್ಬವಾಗಿದೆ ಎಂದು ಹೇಳಿ, ವೃತ್ತಿಪರ ಕೋರ್ಸ್ ಗೆ ಆಗಮಿಸಿ, ಕೋರ್ಸ್ ಮುಗಿಸಿ ಹೊಸ ಜೀವನ ರೂಪಿಸಿಕೊಳ್ಳುತ್ತಿರುವ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಅಕ್ಷಯ ವತಿಯಿಂದ ಶುಭ ಹಾರೈಸಿದರು.

ಅತಿಥಿಯಾಗಿದ್ದ ಕಾಲೇಜಿನ ಹಳೆ ವಿದ್ಯಾರ್ಥಿ ಅರವಿಂದ್ರ ಪ್ರೈ.ಲಿ. ಬೆಂಗಳೂರು ಮೋಟರ‍್ಸ್ ಆಪರೇಷನ್ ಮ್ಯಾನೇಜರ್ ಶಮಂತ್ ಕೋಲ್ಯ ಮಾತನಾಡಿ, ‘ಪುಸ್ತಕಗಳು ನೀಡುವ ಜ್ಞಾನದ ಹಾಗೆಯೇ ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತದೆ ಎಂದರು.

ಈ ಸಂದರ್ಭ ಮಂಗಳೂರು ವಿ.ವಿ ರ‍್ಯಾಂಕ್‌ಗಳಿಸಿದ ವಿದ್ಯಾರ್ಥಿನಿಯರನ್ನು ಗೌರವಿಸಿ ಸನ್ಮಾನಿಸಲಾಯಿತು. ಶೈಕ್ಷಣಿಕ ವರ್ಷದ ಪರೀಕ್ಷೆಗಳಲ್ಲಿ ಟಾಪರ್ಸ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.‌ Best Out Going Student 2022-2023 – ಗಗನ್‌ದೀಪ್ ಮತ್ತು ಪ್ರಣಮ್ಯಾ ಸಿ.ಎ ಅವರನ್ನು ಸನ್ಮಾನಿಸಲಾಯಿತು. ಫ್ಯಾಶನ್ ಶೋ ವಿಜೇತರನ್ನು ಗೌರವಿಸಲಾಯಿತು.

ಸಭಾಕಾರ್ಯಕ್ರಮದ ನಂತರ ಅಕ್ಷಯ ವಿದ್ಯಾರ್ಥಿಗಳಿಂದ ವಿವಿದ ಸಾಂಸ್ಕೃತಿಕ ಕಾರ್ಯಕ್ರಮ ನೇರವೇರಿತು. ಅಕ್ಷಯ ಕಾಲೇಜಿನ ಆಡಳಿತ ವ್ಯವಸ್ಥಾಪಕಿ ಕಲಾವತಿ ಜಯಂತ್, ಪ್ರಾಂಶುಪಾಲರಾದ ಸಂಪತ್ ಪಕ್ಕಳ, ಆಡಳಿತಾಧಿಕಾರಿ ಅರ್ಪಿತ್ ಟಿ.ಎ, ಕಾಲೇಜಿನ ಟ್ರಸ್ಟಿ ಶ್ರೀ ಆನಂದ ಆಚಾರ್ಯ ವಿದ್ಯಾರ್ಥಿ ನಾಯಕ ಗಗನ್‌ದೀಪ್ ಉಪಸ್ಥಿತರಿದ್ದರು.

ಗವರ್ನಿಂಗ್ ಕೌನ್ಸಿಲ್ ಸದಸ್ಯರು, ವಿದ್ಯಾರ್ಥಿಗಳು, ಬೋಧಕ ಹಾಗೂ ಬೋಧಕಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪನ್ಯಾಸಕ ಪ್ರತೀಕ್ ರೈ ಸ್ವಾಗತಿಸಿ ಗ್ರಂಥಪಾಲಕಿ ಪ್ರಭಾವತಿ ವಂದಿಸಿದರು. ಅಕ್ಷಯ ವಿದ್ಯಾರ್ಥಿ ಬಳಗ ಪ್ರಾರ್ಥಿಸಿ, ಕಾರ್ಯಕ್ರಮವನ್ನು ಉಪನ್ಯಾಸಕಿ ಭವ್ಯಶ್ರೀ ನಿರೂಪಿಸಿದರು.

LEAVE A REPLY

Please enter your comment!
Please enter your name here