ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ‘ವಿಶ್ವ ಬಾಲ ಕಾರ್ಮಿಕರ ಪದ್ಧತಿ ವಿರೋಧಿ’ ದಿನಾಚರಣೆಯಂದು ವಿದ್ಯಾರ್ಥಿಗಳಿಂದ ಮತ್ತು ಶಿಕ್ಷಕರಿಂದ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತಾಧಿಕಾರಿ ವಸಂತ ರೈ ಕಾರ್ಕಳ ಬಾಲಕಾರ್ಮಿಕ ಅಥವಾ ಕಿಶೋರ ಕಾರ್ಮಿಕ ಪದ್ಧತಿ ವಿರೋಧದ ಮಹತ್ವದ ಬಗ್ಗೆ ಮಕ್ಕಳಿಗೆ ತಿಳಿಯಪಡಿಸಿದರು. ಶಾಲಾ ಮುಖ್ಯಗುರು ಸರಸ್ವತಿ ಎಂ ಮತ್ತು ಶಿಕ್ಷಕ ವೃಂದ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು . ಶಿಕ್ಷಕಿ ವಿನಯ ವಿ ಶೆಟ್ಟಿ ಪ್ರತಿಜ್ಞಾವಿಧಿ ಬೋಧಿಸಿದರು.