ಪುತ್ತೂರು: ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತೀ ವರ್ಷ ಬೇರೆ ಬೇರೆ ಧ್ಯೇಯ ವಾಕ್ಯಗಳಲ್ಲಿ ಜೂನ್ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ ಅದರಂತೆ ಪುತ್ತೂರಿನ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು..
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾ ಸಂಚಾಲಕರಾದ ಕಾವು ಹೇಮನಾಥ ಶೆಟ್ಟಿಯವರು ಶಾಲಾ ಆವರಣದಲ್ಲಿ ಹಣ್ಣು ಮತ್ತು ತರಕಾರಿ ಬೆಳೆಸುವ ಯೋಜನೆಗೆ ಚಾಲನೆ ನೀಡಿದರು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ನಿವೃತ್ತ ವಿಜ್ಞಾನ ಶಿಕ್ಷಕಿ ವಸಂತಿ ಕೆ ಯವರು ಪ್ಲಾಸ್ಟಿಕ್ ಬಳಕೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ವಿವರಿಸಿದರು. ವಿಜಯ ಕರ್ನಾಟಕ ಪತ್ರಿಕೆಯ ಜಿಲ್ಲಾ ವರದಿಗಾರರಾದ ಸುಧಾಕರ ಸುವರ್ಣ ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ವಿಜಯ ಕರ್ನಾಟಕ ದಿನ ಪತ್ರಿಕೆಯವರು ಆಯೋಜಿಸಿರುವ ಚಿತ್ರಕಲಾ ಸ್ಪರ್ಧೆಯ ತಾಲೂಕು ಮಟ್ಟದ ಉದ್ಘಾಟನಾ ಕಾರ್ಯಕ್ರಮವು ಈ ವೇದಿಕೆಯಲ್ಲೇ ನಡೆಯಿತು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಯಪ್ರಕಾಶ್ ರೈ ನೂಜಿಬೈಲು, ರವೀಂದ್ರ ದೇರಳ, ಧನುಷ್ ಕಲ್ಲಡ್ಕ, ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅವನಿಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಈ ಕಾರ್ಯಕ್ರಮವನ್ನು ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಲಾಯಿತು. ಮುಖ್ಯೋಪಾಧ್ಯಾಯಿನಿ ಜಯಲಕ್ಷ್ಮಿ ಎ ಯವರು ಸ್ವಾಗತಿಸಿದರು. ಶಿಕ್ಷಕಿ ಸಂಧ್ಯಾ ಕೆ ಯವರು ನಿರೂಪಿಸಿದ ಕಾರ್ಯಕ್ರಮದಲ್ಲಿ, ಶಿಕ್ಷಕಿ ಗೀತಾ ರೈ ಕೆ ರವರು ವಂದನಾರ್ಪಣೆಗೈದರು.