ಉಪ್ಪಿನಂಗಡಿ: ಇಲ್ಲಿನ ಜ್ಞಾನ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು. ಈ ಸಂದರ್ಭ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು.
ಶಾಲಾ ಸಂಚಾಲಕ ಅಬ್ದುಲ್ ರವೂಫ್ ಯು.ಟಿ. ಮಾತನಾಡಿ, ಪರಿಸರವನ್ನು ಉಳಿಸಿ ಬೆಳೆಸುವ ಮೂಲಕ ಮುಂದಿನ ಪೀಳಿಗೆಗೆ ಅಮೂಲ್ಯ ಕಾಣಿಕೆಯನ್ನು ನಾವು ನೀಡಬೇಕು ಎಂದರಲ್ಲದೆ, ಪರಿಸರ ಸಂರಕ್ಷಣೆ, ಪರಿಸರದ ಮಹತ್ವವನ್ನು ತಿಳಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಶಾಲಾ ಪ್ರಾಂಶುಪಾಲ ಇಬ್ರಾಹೀಂ ಕಲೀಲ್, ವಿದ್ಯಾರ್ಥಿಗಳಿಗೆ ಪರಿಸರ ಸಂರಕ್ಷಣೆಯ ಅರಿವು ಮೂಡಿಸಿದರು. ಬಳಿಕ ಪರಿಸರದ ಕುರಿತಾದ ಭಾಷಣ, ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.
ಎಸೆಸ್ಸೆಲ್ಸಿ ವಿದ್ಯಾರ್ಥಿಗಳು ಪರಿಸರ ಗೀತೆ ಹಾಡಿದರು. ಶಿಕ್ಷಕರಾದ ಅರುಣಾ ಸ್ವಾಗತಿಸಿದರು. ಸವಿತಾ ವಂದಿಸಿದರು. ಸುಶ್ಮಿತಾ ಕಾರ್ಯಕ್ರಮ ನಿರೂಪಿಸಿದರು.