ಪುತ್ತೂರು: ಪುತ್ತೂರಿನ ಸುದಾನ ವಸತಿ ಶಾಲೆಯಲ್ಲಿ ಜೂನ್ 12 ರಂದು ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಫ್ರೆಶರ್ಸ್ ಡೇ ಯನ್ನು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶಾಲಾ ಮುಖ್ಯ ಶಿಕ್ಷಕಿ ಶೋಭಾ ನಾಗರಾಜ್ ರವರು ವಿದ್ಯಾರ್ಥಿ ಜೀವನದಲ್ಲಿ ಸಿಗುವ ಉತ್ತಮ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು, ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲೂ ಆಸಕ್ತಿಯಿಂದ ತೊಡಗಿಸಿಕೊಳ್ಳಬೇಕು, ವೈಯಕ್ತಿಕ ಶಿಸ್ತನ್ನು ಪಾಲಿಸುತ್ತಾ ಉತ್ತಮ ಪ್ರಜೆಯಾಗಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಹೊಸದಾಗಿ ಸೇರಿದ ವಿದ್ಯಾರ್ಥಿಗಳು ನೃತ್ಯ, ಸಂಗೀತ, ಮಿಮಿಕ್ರಿ, ಚಿತ್ರಕಲೆ, ಏಕಪಾತ್ರಾಭಿನಯ ಮುಂತಾದ ವೈವಿಧ್ಯಮಯ ಪ್ರತಿಭೆಯ ಪ್ರದರ್ಶನದಿಂದ ಎಲ್ಲರನ್ನೂ ರಂಜಿಸಿದರು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಲಲಿತ ಕಲಾಸಂಘದ ನಿರ್ದೇಶಕಿ ಬಕುಲ ಕಾರ್ಯಕ್ರಮವನ್ನು ನಿರೂಪಿಸಿ, ಹೇಮಲತ ದಾಖಲಿಸಿದರು. ಶಾಲೆಯ ಲಲಿತ ಕಲಾಸಂಘವು ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.