ವಿವೇಕಾನಂದ ಪ.ಪೂ ಕಾಲೇಜಿನ ಬಾಲಕರ ಖೋ -ಖೋ ತಂಡ ರಾಷ್ಟ್ರಮಟ್ಟದಲ್ಲಿ 7ನೇ ಸ್ಥಾನ

0

ಪುತ್ತೂರು: ಸ್ಕೂಲ್‌ಗೇಮ್ ಫೆಡರೇಶನ್‌ ಆಫ್‌ ಇಂಡಿಯಾ ದೆಹಲಿಯಲ್ಲಿ ನಡೆಸಿದ 66ನೇರಾಷ್ಟ್ರ ಮಟ್ಟದ ಖೋ ಖೋ ಪಂದ್ಯಾಟದಲ್ಲಿ ವಿದ್ಯಾಭಾರತಿಯನ್ನು ಪ್ರತಿನಿಧಿಸಿದ ವಿವೇಕಾನಂದ ಪದವಿ ಪೂರ್ವಕಾಲೇಜಿನ ಬಾಲಕರ ತಂಡವು ಏಳನೇ ಸ್ಥಾನವನ್ನು ಪಡೆಯುವ ಮೂಲಕ ವಿಶೇಷ ಸಾಧನೆಯನ್ನು ದಾಖಲಿಸಿದ್ದಾರೆ.

ತಂಡದಲ್ಲಿ ವಿದ್ಯಾರ್ಥಿಗಳಾದ ಪವನ್, ಗುರುಪ್ರಸಾದ್, ಭರತ್, ಅಶ್ವಿತ್ ಭಂಡಾರಿ, ನಂದನ್,ಮಂಜುನಾಥ, ಸಾತ್ವಿಕ್, ಪವನ್‌ಕುಮಾರ್, ಶ್ರೀನಿಶ್, ಜೀವನ್ ಭಾಗವಹಿಸಿದ್ದರು. ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರವಿಶಂಕರ್, ಡಾ. ಜ್ಯೋತಿ,ಯತೀಶ್ ಬಾರ್ತಿಕುಮೆರ್ ಹಾಗೂ ಕಾರ್ತಿಕ್‌ಎನ್‌ ಇವರ ಮಾರ್ಗದರ್ಶನದಲ್ಲಿ ಈ ತಂಡವು ತರಬೇತಿಯನ್ನು ಪಡೆದಿರುತ್ತದೆ. ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here