ಜೂ.15: ರಾಮಕುಂಜೇಶ್ವರ ವಸತಿ ಶಾಲೆಯ ವಿಸ್ತೃತ ಕಟ್ಟಡದ ಉದ್ಘಾಟನೆ

0

ರಾಮಕುಂಜ: ಶ್ರೀ ರಾಮಕುಂಜೇಶ್ವರ ವಿದ್ಯಾವರ್ಧಕ ಸಭಾದ ಆಡಳಿತಕ್ಕೆ ಒಳಪಟ್ಟ ರಾಮಕುಂಜ ಶ್ರೀ ರಾಮಕುಂಜೇಶ್ವರ ವಸತಿ ಶಾಲೆಯ ವಿಸ್ತೃತ ಕಟ್ಟಡದ ಉದ್ಘಾಟನೆ, ವಿದ್ಯಾರ್ಥಿ ನಿಲಯದ ಸ್ಥಾಪನಾ ವರ್ಷದ ಪದವಿಪೂರ್ವ ವಿದ್ಯಾರ್ಥಿಗಳ ಸಮಾವೇಶ ಹಾಗೂ 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಜೂ.15ರಂದು ಬೆಳಿಗ್ಗೆ 10.30ಕ್ಕೆ ಶ್ರೀ ರಾಮಕುಂಜೇಶ್ವರ ಆಂಗ್ಲಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆಯಲಿದೆ.


ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀ ಪಾದಂಗಳವರು ಉದ್ಘಾಟಿಸಿ, ಆಶೀರ್ವಚನ ನೀಡಲಿದ್ದಾರೆ. ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ರಾಮಕೃಷ್ಣ ಶಿವಪ್ರಸಾದ್ ಆಳ್ವ ಅವರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಆಡಳಿತ ಮಂಡಳಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here