ಶೂನ್ಯ ಬಡ್ಡಿ ದರದ ಕೃಷಿ ಸಾಲದ ಮಿತಿ ರೂ.5 ಲಕ್ಷಕ್ಕೆ ಹೆಚ್ಚಿಸಲು ಕ್ರಮ

0

ಬೆಂಗಳೂರು:ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲದ ಪ್ರಮಾಣವನ್ನು 3 ಲಕ್ಷ ರೂಪಾಯಿಗಳಿಂದ 5 ಲಕ್ಷ ರೂಪಾಯಿಗೇರಿಸಲು ರಾಜ್ಯ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಶೂನ್ಯ ಬಡ್ಡಿ ದರದಲ್ಲಿ ನೀಡುವ ಕೃಷಿ ಸಾಲದ ಪ್ರಮಾಣವನ್ನು ಹೆಚ್ಚಿಸುವ ಕುರಿತು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದನ್ನು ಜಾರಿ ಮಾಡುವ ಬದ್ಧತೆ ನಮಗೆ ಇದೆ ಎಂದು ಅವರು ಹೇಳಿದ್ದಾರೆ.

ರೈತರಿಗೆ ಮಧ್ಯಮಾವಧಿ ಸಾಲದ ರೂಪದಲ್ಲಿ ಶೇ.3ರ ಬಡ್ಡಿ ದರದೊಂದಿಗೆ 10 ಲಕ್ಷ ರೂ. ಸಾಲ ನೀಡಲಾಗುತ್ತಿದ್ದು, ಈ ಪ್ರಮಾಣವನ್ನು 10ರಿಂದ 20 ಲಕ್ಷ ರೂಪಾಯಿಗಳಿಗೆ ಹೆಚ್ಚಳ ಮಾಡಲಾಗುವುದು ಎಂದ ಅವರು, ಸಹಕಾರ ಇಲಾಖೆಯಲ್ಲಿ ಕೆಲಸ ಮಾಡಲು ನನ್ನನ್ನು ನೇಮಕ ಮಾಡಲಾಗಿದೆ. ಹೀಗಾಗಿ ನನ್ನ ಮುಂದಿರುವ ಕೆಲಸ ಮಾಡುತ್ತೇನೆ. ಇಲ್ಲಿ ನಡೆದಿರುವ ಅಕ್ರಮ ಆರೋಪಗಳ ತನಿಖೆಗಾಗಿ ಹೆಚ್ಚಿನ ಸಮಯ ವ್ಯಯ ಮಾಡುವುದಿಲ್ಲ. ಒಂದು ವೇಳೆ ಸಹಕಾರ ಇಲಾಖೆಯಲ್ಲಿ ಅವ್ಯವಹಾರ ನಡೆದಿದ್ದರೆ ಸಹಜವಾಗಿಯೇ ಅದು ಇಲಾಖೆಯ ತನಿಖೆಗೆ ಒಳಪಡುತ್ತದೆ ಎಂದರು. ಜೂ.16ರಂದು ಡಿಸಿಸಿ ಬ್ಯಾಂಕ್‌ಗಳ ಸಭೆ ಕರೆದಿದ್ದು, ಆಯಾ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮಾಹಿತಿ ಪಡೆಯಲಾಗುವುದು. ಸಹಕಾರ ಇಲಾಖೆಯನ್ನು ಜನರ ಇಲಾಖೆಯನ್ನಾಗಿ ಮಾಡಬೇಕೆಂಬುದು ನಮ್ಮ ಉದ್ದೇಶ ಎಂದು ಸಚಿವ ರಾಜಣ್ಣ ಹೇಳಿದರು.

ಶೂನ್ಯ ಬಡ್ಡಿ ದರದಲ್ಲಿ ನೀಡಲಾಗುತ್ತಿದ್ದ ಕೃಷಿ ಸಾಲದ ಮಿತಿಯನ್ನು ರೂ.3 ಲಕ್ಷದಿಂದ 5 ಲಕ್ಷಕ್ಕೆ ಏರಿಸಬೇಕು ಎಂದು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರ ನೇತೃತ್ವದ ನಿಯೋಗವೊಂದು ಕೆಲ ದಿನಗಳ ಹಿಂದೆಯಷ್ಟೆ ಸಹಕಾರ ಸಚಿವ ರಾಜಣ್ಣ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತ್ತು.

LEAVE A REPLY

Please enter your comment!
Please enter your name here