52 ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

0

ಮಂಗಳೂರು: ಬಾಕಿ ಉಳಿದಿರುವ 52 ಗ್ರಾಮ ಒನ್ ಕೇಂದ್ರ ತೆರೆಯಲು ಗ್ರಾಮ ಪಂಚಾಯತ್‌ಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫ್ರಾಂಚೈಸಿ ಅರ್ಜಿದಾರರು ಡಿಪ್ಲೊಮಾ, ಐ,ಟಿ,ಐ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣಿತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯ. ಅರ್ಜಿದಾರರು ಸ್ವಂತ ಅಥವಾ ಬಾಡಿಗೆ ಕಟ್ಟಡ ಹೊಂದಿರಬೇಕು ಅಥವಾ ಟೈಲ್ಸ್, ಗ್ರಾನೈಟ್ ಫ್ಲೋರಿಂಗ್, ಆರ್‌ಸಿಸಿ ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ತಯಾರಾಗಿರಬೇಕು. ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ ಉತ್ತಮ, ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ, ಮಹಿಳೆಯರಿಗೆ ವಿಕಲಚೇತನರಿಗೆ ಹಾಗೂ ತೃತೀಯ ಲಿಂಗಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.
ನಾಳೆ ಕಡೆ ದಿನ: ಅರ್ಜಿಯನ್ನು ವೆಬ್‌ಸೈಟ್ ವಿಳಾಸ:https://www.karnatakaone.gov.in ಮೂಲಕ ಜೂ.15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-69008800, 49203888 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here