ಪುತ್ತೂರು: ಪುತ್ತೂರು ಶಿಕ್ಷಣ ಸಂಪನ್ಮೂಲ ಕೇಂದ್ರ ವತಿಯಿಂದ ವಿಶ್ವ ಬಾಲಕಾರ್ಮಿಕರ ವಿರೋಧಿ ದಿನಾಚರಣೆ ಪ್ರಯುಕ್ತ ಕೆಮ್ಮಾಯಿ ಕೃಷ್ಣನಗರ ಶಾಲೆಯಲ್ಲಿ ಕಾನೂನು ಮಾಹಿತಿ ಕಾರ್ಯಾಗಾರ ನಡೆಯಿತು. ನ್ಯಾಯವಾದಿ ಹಾಗೂ ಶಿಕ್ಷಣ ಸಂಪನ್ಮೂಲ ಕೇಂದ್ರದ ಅಧ್ಯಕ್ಷೆ ಹರಿಣಾಕ್ಷಿ ಜೆ.ಶೆಟ್ಟಿ ಕಾನೂನು ಮಾಹಿತಿ ನಡೆಸಿಕೊಟ್ಟರು. ಎಸ್ಡಿಎಂಸಿ ಅಧ್ಯಕ್ಷ ಗೋಪಾಲ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಶಿಕ್ಷಕಿ ಮರಿಯಮ್ಮ ಎ.ಎಸ್. ಸ್ವಾಗತಿಸಿ ಪ್ರತಿಭಾ ಕೆ. ಕಾರ್ಯಕ್ರಮ ನಿರೂಪಿಸಿದರು. ನಾಗವೇಣಿ ವಂದಿಸಿದರು. ನೂರು ಮಕ್ಕಳು ಮಾಹಿತಿ ಪಡೆದುಕೊಂಡರು.