ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಶಿಕ್ಷಕ – ರಕ್ಷಕ ಸಂಘದ ಸಭೆ

0

ಪುತ್ತೂರು: ನೆಹರು ನಗರದ ವಿವೇಕಾನಂದ ಸೆಂಟ್ರಲ್ ಸ್ಕೂಲ್‌ನಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಮೊದಲ ಶಿಕ್ಷಕ-ರಕ್ಷಕ ಸಂಘದ ಸಭೆ ಜೂ.10ರಂದು ಕೇಶವ ಸಂಕಲ್ಪ ಸಭಾಂಗಣದಲ್ಲಿ ನಡೆಸಲಾಯಿತು.

ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷೆ ವಸಂತಿ. ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳ ಯಾವುದೇ ಶೈಕ್ಷಣಿಕ ಬೆಳವಣಿಗೆಯಲ್ಲಿ ಏನೇ ಸಮಸ್ಯೆಗಳಿದ್ದರೂ ಅವುಗಳ ಪರಿಹಾರಕ್ಕೆ ಆಡಳಿತ ಮಂಡಳಿಯು ಸದಾ ಕೈ ಜೋಡಿಸಿ ಬೆಂಬಲಿಸುತ್ತದೆ ಎಂಬ ಭರವಸೆ ನೀಡಿದರು. ನೆಮ್ಮದಿ ಆರೋಗ್ಯ ಪ್ಲಸ್‌ನ ಮನಃಶಾಸ್ತ್ರಜ್ಞೆ ಶ್ರದ್ಧಾ ರೈ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿ ಪೋಷಕರಿಗೆ ಸಲಹೆ ನೀಡಿದರು. ಆಡಳಿತ ಮಂಡಳಿ ಸಂಚಾಲಕ ಭರತ್ ಪೈ ಮಾತನಾಡಿ ಶಾಲೆಯಲ್ಲಿ ಅತೀ ಶೀಘ್ರದಲ್ಲಿ ಯೋಗ ತರಗತಿ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ವಿದ್ಯಾರ್ಥಿಗಳಿಗೆ ಕಾರ್ಯಾಗಾರಗಳು ನಡೆಯಲಿವೆ ಎಂದು ತಿಳಿಸಿದರು. ಶಾಲಾ ಪ್ರಾಂಶುಪಾಲೆ ಸಿಂಧೂ ವಿ.ಜಿ ಮತನಾಡಿ ಸಂಸ್ಥೆ ಪೋಷಕರು ಮತ್ತು ಶಿಕ್ಷಕರ ಸಹಯೋಗದಿಂದ ವಿದ್ಯಾರ್ಥಿಗಳ ಬೆಳವಣಿಗೆಯ ಸಾಧ್ಯ ಎಂದರು.


ಪೋಷಕರ ಜೊತೆಗೆ ಸಂವಾದ ನಡೆಸಲಾಯಿತು. ಪ್ರತೀ ತರಗತಿಯಿಂದ ಪೋಷಕರ ಪ್ರತಿನಿಧಿಯನ್ನು ಆಯ್ಕೆ ಮಾಡಿ, ರಕ್ಷಕ ಸಮಿತಿಯನ್ನು ರಚಿಸಲಾಯಿತು. ಕಳೆದ ಶೈಕ್ಷಣಿಕ ವರ್ಷದ ಪೋಷಕ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪಪ್ರಾಂಶುಪಾಲೆ ಹೇಮಾವತಿ ಎಮ್.ಎಸ್ ವಂದಿಸಿದರು. ಶಿಕ್ಷಕಿಯರಾದ ವಿಶಾಲಾಕ್ಷಿ ಕಾರ್ಯಕ್ರಮ ನಿರೂಪಿಸಿ, ಶ್ರೀದೇವಿಯವರು ಸ್ವಾಗತಿಸಿದರು. ಶಾಲಾ ಶಿಕ್ಷಕರು ಹಾಗೂ ಪೋಷಕರ ಪರಸ್ಪರ ವಿಚಾರ ವಿನಿಮಯ ನಡೆಯಿತು.

LEAVE A REPLY

Please enter your comment!
Please enter your name here