ನಾಳೆ ಜೂ.16ಕ್ಕೆ ಪುತ್ತೂರು ‘ಗೋಪಣ್ಣ’ ಸ್ಮೃತಿ -ಭಾಗವತ ಗೋವಿಂದ ನಾಯಕ್ ಪಾಲೆಚ್ಚಾರು, ನಿವೃತ್ತ ಶಿಕ್ಷಕಿ ಬಿ.ಸುಲೋಚನಾರಿಗೆ ಗೌರವ

0


ಪುತ್ತೂರು: ಯಕ್ಷಗಾನದ ವಾದನ ಪರಿಕರಕ್ಕೆ ಮತ್ತು ವಾದನಕ್ಕೆ ಹೊಸ ಆಯಾಮವನ್ನು ತೋರಿದ ಪುತ್ತೂರು ಗೋಪಾಲಕೃಷ್ಣಯ್ಯ ಯಾ ಗೋಪಣ್ಣ ಇವರ ಸ್ಮೃತಿ ಕಾರ‍್ಯಕ್ರಮವು ಜೂ.16ರಂದು ಮಧ್ಯಾಹ್ನ ಗಂಟೆ 2ಕ್ಕೆ ಬಪ್ಪಳಿಗೆ ‘ಅಗ್ರಹಾರ’ ನಿವಾಸದಲ್ಲಿ ಜರುಗಲಿದೆ. ಈ ಸಂದರ್ಭದಲ್ಲಿ ಯಕ್ಷಗಾನ ಭಾಗವತ, ಯಕ್ಷಗುರು ಗೋವಿಂದ ನಾಯಕ್ ಪಾಲೆಚ್ಚಾರು ಹಾಗೂ ನಿವೃತ್ತ ಅಧ್ಯಾಪಿಕೆ ಶ್ರೀಮತಿ ಬಿ.ಸುಲೋಚನಾ ಅವರಿಗೆ ‘ಗೋಪಣ್ಣ ಸ್ಮೃತಿ ಗೌರವ’ವನ್ನು ಪ್ರದಾನಿಸಲಾಗುವುದು ಎಂದು ಪಿ.ಜಿ.ಜಗನ್ನಿವಾಸ ರಾವ್ ತಿಳಿಸಿದ್ದಾರೆ.
ಗೋಪಣ್ಣ ಸ್ಮೃತಿ ಬಳಿಕ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.

LEAVE A REPLY

Please enter your comment!
Please enter your name here