ಜೂ 17: ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

0

ಪುತ್ತೂರು: ಸಂತ ಫಿಲೋಮಿನ ಪದವಿ ಪೂರ್ವ ಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮವು ಜೂ.17ರಂದು ಬೆಳಗ್ಗೆ ಕಾಲೇಜಿನ ಬೆಳ್ಳಿಹಬ್ಬದ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ರೆ.ಫಾ.ಲಾರೆನ್ಸ್ ಮಸ್ಕರೇನಸ್ ವಹಿಸಲಿದ್ದು, ವಿದ್ಯಾರಶ್ಮಿ ಸಮೂಹ ಸಂಸ್ಥೆಯ ಆಡಳಿತ ಅಧಿಕಾರಿ ಅಶ್ವಿನ್ ಎಲ್ ಶೆಟ್ಟಿ ಇವರು ನೂತನ ವಿದ್ಯಾರ್ಥಿ ಸಂಘವನ್ನು ಉದ್ಘಾಟನೆ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂತ ಫಿಲೋಮಿನಾ ಸಮೂಹ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್ ನಿರ್ದೇಶಕ ರೆ.ಫಾ.ಸ್ಟ್ಯಾನಿ ಪಿಂಟೋ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿ’ ಕೋಸ್ತಾ, ಕಾಲೇಜಿನ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಾಮಚ್ಚನ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ ಜಗಜ್ಜೀವನದಾಸ್ ರೈ ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here