ನೆಲ್ಯಾಡಿ: 2022-23ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ನೆಲ್ಯಾಡಿ ಜ್ಞಾನೋದಯ ಬೆಥನಿ ಆಂಗ್ಲಮಾಧ್ಯಮ ಶಾಲೆಯ ಅನುತ್ತೀರ್ಣಗೊಂಡಿದ್ದ ವಿದ್ಯಾರ್ಥಿಯೋರ್ವ ಮರುಮೌಲ್ಯ ಮಾಪನದಲ್ಲಿ ಉತ್ತೀರ್ಣಗೊಂಡಿದ್ದು ಇದೀಗ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ.
ವಿದ್ಯಾರ್ಥಿ ಮುರ್ಷಿದ್ ಅಹಮದ್‌ರವರಿಗೆ ವಿಜ್ಞಾನ ವಿಷಯದಲ್ಲಿ ಮರು ಮೌಲ್ಯಪನದಲ್ಲಿ 48 ಮಾರ್ಕ್ ದೊರೆತಿದೆ. ಇವರು ಒಟ್ಟು 402 ಅಂಕ ಪಡೆದುಕೊಂಡು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಶಾಲೆಯಿಂದ ಒಟ್ಟು 74 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಇದೀಗ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣಗೊಂಡು ಶೇ.100 ಫಲಿತಾಂಶ ಲಭಿಸಿದೆ. 22 ವಿದ್ಯಾರ್ಥಿಗಳು ಅತ್ಯುತ್ತಮ ಶ್ರೇಣಿಯಲ್ಲಿ, 45 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಹಾಗೂ ಏಳು ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಸಂಸ್ಥೆಗೆ ಒಟ್ಟಾರೆ ಮೌಲ್ಯಾಂಕನವು ಶೇಕಡ 89.8 ಬಂದಿದ್ದು ಶಾಲೆಗೆ ಎ ಗ್ರೇಡ್ ದೊರೆತಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.