ಫಿಲೋಮಿನಾ ಪಿಯುಸಿ ವಿದ್ಯಾರ್ಥಿ ಸಂಘ ಉದ್ಘಾಟನೆ

0

ಪುತ್ತೂರು: ಸಮಯದ ಮಹತ್ವವನ್ನು ಅರಿತು ಮುನ್ನಡೆಯಬೇಕು.ಛಲ, ಆಸಕ್ತಿ, ಏಕಾಗ್ರತೆಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಬದುಕಿನಲ್ಲಿ ಯಶಸ್ಸನ್ನು ಕಾಣಬೇಕು ಎಂದು ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಅಶ್ವಿನ್‌ ಎಲ್ ಶೆಟ್ಟಿ ಹೇಳಿದರು.


ಅವರು ಸಂತ ಫಿಲೋಮಿನಾ ಪದವಿ ಪೂರ್ವಕಾಲೇಜಿನ 2023-24ನೇ ಸಾಲಿನ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು.ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಅವಕಾಶಗಳನ್ನು ಸವಾಲಾಗಿ ಸ್ವೀಕರಿಸಬೇಕು. ಕಠಿಣ ಪರಿಶ್ರಮ ಮುಖ್ಯವಾಗಿರುತ್ತದೆ.ಬದುಕಿನಲ್ಲಿ ಪ್ರತಿಕ್ಷಣ ಧನಾತ್ಮಕ ಚಿಂತನೆಯನ್ನು ಮಾಡುವ ಮೂಲಕ ಯಶಸ್ಸನ್ನು ಪಡೆಯಬೇಕು ಎಂದು ಹೇಳಿದರು.


ಅಧ್ಯಕ್ಷತೆಯನ್ನು ವಹಿಸಿದ ಮಾಯಿದೆ ದೇವುಸ್ ಶಿಕ್ಷಣ ಸಂಸ್ಥೆಯ ಸಂಚಾಲಕ ರೆ. ಫಾ. ಲಾರೆನ್ಸ್ ಮಸ್ಕರೇನಸ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಉತ್ತಮ ನಾಯಕತ್ವವನ್ನು ರೂಢಿಸಿಕೊಳ್ಳಬೇಕು. ಹೃದಯ ಶ್ರೀಮಂತಿಕೆಯನ್ನು ಮೈಗೂಡಿಸಿಕೊಳ್ಳಬೇಕು.ತ್ಯಾಗ, ಪರಿಶ್ರಮದ ಮೂಲಕ ಜೀವನವನ್ನು ಸಾರ್ಥಕ ಪಡಿಸಿಕೊಳ್ಳಬೇಕು.ಒಳ್ಳೆಯ ಸಾಧನೆಯನ್ನು ಮಾಡಿ ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬಾಳಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ.ಫಾ.ಸ್ಟ್ಯಾನಿ ಪಿಂಟೋ ಮಾತನಾಡಿ ಕೋಪ,ಚಿಂತೆ,ದ್ವೇಷ ಮತ್ತು ಪಶ್ಚಾತ್ತಾಪದಲ್ಲಿ ಸಮಯವನ್ನು ವ್ಯರ್ಥ ಮಾಡದೆ ಇರುವ ಅವಕಾಶಗಳನ್ನು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು, ಜೀವನ ಅತ್ಯಂತ ಕಿರಿದಾಗಿದ್ದು ಅದನ್ನು ಒಳ್ಳೆಯ ರೀತಿಯಲ್ಲಿ ಆನಂದಿಸಿಕೊಂಡು ಬದುಕಬೇಕು ಎಂದು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.


ಸಾರ್ವಜನಿಕ ಆಡಳಿತ ಸ್ನಾತಕೋತ್ತರ ಪದವಿಯಲ್ಲಿ 6 ನೇ ರ್‍ಯಾಂಕ್ ಪಡೆದ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ರೆ.ಫಾ.ಸ್ಟ್ಯಾನಿ ಪಿಂಟೋ ಅವರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳನ್ನು ಕಾಲೇಜಿನ ಸಂಚಾಲಕ ರೆ.ಫಾ. ಲಾರೆನ್ಸ್‌ ಮಸ್ಕರೇನಸ್ ಹೂಗುಚ್ಛ ನೀಡಿ ಅಭಿನಂದಿಸಿದರು.
2022-23 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಕ್ಕೆ10 ನೇ ರ್‍ಯಾಂಕ್ ಪಡೆದ ಕಾಲೇಜಿನ ವಾಣಿಜ್ಯ ವಿಭಾಗದ ಸಮೃದ್ಧಿ ಆರ್‌ ಇವರನ್ನು ಸನ್ಮಾನಿಸಲಾಯಿತು.ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಶ್ರೇಣಿಯಲ್ಲಿ ತೆರ್ಗಡೆ ಹೊಂದಿದ 174 ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಅಭಿನಂದಿಸಲಾಯಿತು.


ಇದೇ ಸಂದರ್ಭದಲ್ಲಿ ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವನ್‌ ಪೊನ್ನಪ್ಪ ಎಂ ಎನ್, ಕಾರ್ಯದರ್ಶಿ ತನು ಕೆ.ಜೊತೆ ಕಾರ್ಯದರ್ಶಿ ಪೃಥ್ವಿಕೆ.ಸಹಿತ ತರಗತಿವಾರು ಪ್ರತಿನಿಧಿಗಳು, ವಿವಿಧ ಸಂಘಗಳ ಪದಾಧಿಕಾರಿಗಳಿಗೆ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಅಶೋಕ್‌ ರಾಯನ್‌ ಕ್ರಾಸ್ತಾ ಪ್ರಮಾಣವಚನವನ್ನು ಬೋಧಿಸಿದರು.


ಮಾಯಿದೆ ದೇವುಸ್‌ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್‌ ಡಿ.ಕೋಸ್ತಾ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಮಾಮಚ್ಚನ್ ಎಂ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಜಗಜ್ಜೀವನದಾಸ ರೈ ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ.ಅಶೋಕ್‌ ರಾಯನ್‌ ಕ್ರಾಸ್ತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಪ್ರದರ್ಶನ ಕಲಾ ಸಂಘದ ವಿದ್ಯಾರ್ಥಿಗಳು ಪ್ರಾರ್ಥಿಸಿ, ನೂತನ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರವನ್ ಎಂ.ಎನ್. ಸ್ವಾಗತಿಸಿ, ಕಾರ್ಯದರ್ಶಿ ತನ್ವಿಕೆ.ಅತಿಥಿಗಳನ್ನು ಪರಿಚಯಿಸಿದರು.ಜತೆ ಕಾರ್ಯದರ್ಶಿ ಪೃಥ್ವಿಕೆ.ವಂದಿಸಿ, ವಿದ್ಯಾರ್ಥಿನಿ ಕೃಷ್ಣಪ್ರಿಯ ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here