ದರ್ಬೆ ಲಿಟ್ಲ್‌ ಫ್ಲವರ್‌ ಶಾಲೆಯಲ್ಲಿ ಶೈಕ್ಷಣಿಕ ಸಂಘಗಳ ಉದ್ಘಾಟನಾ ಕಾರ್ಯಕ್ರಮ

0

ಪುತ್ತೂರು :ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2023 -2024 ನೇ ಸಾಲಿನ ವಿವಿಧ ಶೈಕ್ಷಣಿಕ ಸಂಘಗಳ ಉದ್ಘಾಟನಾ ಸಮಾರಂಭವು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷೆತೆಯಲ್ಲಿ ನಡೆಯಿತು.

9 ಸಂಘಗಳ ವಿದ್ಯಾರ್ಥಿ ಪ್ರತಿನಿಧಿಗಳ ಉಪಸ್ಥಿತಿಯೊಂದಿಗೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ ಮಕ್ಕಳಲ್ಲಿ ಬಾಲ್ಯದಿಂದಲೇ ನಾಯಕತ್ವದ ಗುಣವನ್ನು ಬೆಳೆಸಿ ಸಾಮಾಜಿಕ ಜವಾಬ್ದಾರಿ ಮೂಡಿಸುವ ಕಾರ್ಯ ಈ ಸಂಘಗಳಿಂದ ನಡೆಯಲಿದೆ ಎಂದರು.

ವಿವಿಧ ಸಂಘದ ವತಿಯಿಂದ ಸಂಘದ ಉದ್ದೇಶವನ್ನು ಪ್ರಸ್ತುತ ಪಡಿಸುವ ಕಾರ್ಯಕ್ರಮಗಳು ನೆರವೇರಿತು. ವೇದಿಕೆಯಲ್ಲಿ ಹಿರಿಯ ಶಿಕ್ಷಕಿ ಭಗಿನಿ ವಿನೀತಾ ಪಿರೇರಾ, ವಿಲ್ಮಾ ಫೆರ್ನಾಂಡೀಸ್ ಉಪಸ್ಥಿತರಿದ್ದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕಿ ಶ ಹರಿಣಾಕ್ಷಿ ಸ್ವಾಗತಿಸಿದರು. ಶಿಕ್ಷಕಿ ಸುಶ್ಮಿತಾ ಯತೀಶ್ ವಂದಿಸಿದರು. ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here