ದೇವಸ್ಯ: ಗಾಂಜಾ ಸೇವನೆ ವ್ಯಕ್ತಿ ವಶಕ್ಕೆ

0

ಪುತ್ತೂರು: ದೇವಸ್ಯ ಬೆಳಿಯೂರುಕಟ್ಟೆಯಲ್ಲಿ ವ್ಯಕ್ತಿಯೊಬ್ಬರು ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ಮಾಡುತ್ತಿರುವುದನ್ನು ಗಮನಿಸಿದ ಸಂಪ್ಯ ಪೊಲೀಸರು ಆತನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಆತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿರುವ ಘಟನೆ ನಡೆದಿದೆ.


ಸಂಪ್ಯ ಪೊಲೀಸರು ರೌಂಡ್ಸ್ ಕರ್ತವ್ಯದಲ್ಲಿದ್ದಾಗ ಬಲ್ನಾಡು ಗ್ರಾಮದ ಬೆಳಿಯೂರುಕಟ್ಟೆ ಸಮೀಪ ಸಾರ್ವಜನಿಕ ಸ್ಥಳದಲ್ಲಿ ವ್ಯಕ್ತಿಯೊಬ್ಬ ಅನುಚಿತವಾಗಿ ವರ್ತಿಸುತ್ತಿರುವುದನ್ನು ಗಮನಿಸಿ ಆತನನ್ನು ವಿಚಾರಿಸಿ ಬಳಿಕ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಆತ ಅಮಲು ಪದಾರ್ಥ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಗಾಂಜಾ ಸೇವನೆ ಮಾಡಿದ ವ್ಯಕ್ತಿ ಅಬೂಬ್ಕಕರ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

LEAVE A REPLY

Please enter your comment!
Please enter your name here