ಪೆರಿಯಡ್ಕ ಸರ್ವೋದಯ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

0

ಉಪ್ಪಿನಂಗಡಿ: ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್, ಸರ್ವೋದಯ ಪ್ರೌಢಶಾಲೆ ಪೆರಿಯಡ್ಕ, ಉಪ್ಪಿನಂಗಡಿ ಇದರ ಶೈಕ್ಷಣಿಕ ವರ್ಷದ ಮೊದಲ ಪೋಷಕರ ಸಭೆ ಸಂಸ್ಥೆಯ ಕಾರ್ಯದರ್ಶಿಯಾಗಿರುವ ಆದಿಚುಂಚನಗಿರಿ ಮಂಗಳೂರು ಶಾಖಾ ಮಠದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯಿತು.


ಆಶೀರ್ವಚನ ನೀಡಿದ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿಯವರು, ಭವ್ಯ ಭಾರತದ ನಿರ್ಮಾಣಕ್ಕೆ ಗಗನ ಚುಂಬಿ ಕಟ್ಟಡಗಳನ್ನು ನಿರ್ಮಿಸಿದರೆ ಸಾಧ್ಯವಾಗುವುದಿಲ್ಲ ಅಥವಾ ಹಣವಂತರಾದರೆ ಸಾಧ್ಯವಾಗುವುದಿಲ್ಲ, ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ಕೊಟ್ಟಾಗ ಮಾತ್ರ ಭವ್ಯ ಭಾರತದ ನಿರ್ಮಾಣವಾಗಲು ಸಾಧ್ಯ. ಈ ನಿಟ್ಟಿನಲ್ಲಿ ಬಿಜಿಎಸ್ ವಿದ್ಯಾಸಂಸ್ಥೆಗಳು ಭಾರತದ ವಿವಿಧೆಡೆಗಳಲ್ಲಿ ಶಿಕ್ಷಣ ನೀಡುತ್ತಿದೆ. ಪೋಷಕರು ಮಕ್ಕಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಂಡು ಉತ್ತಮ ಹವ್ಯಾಸ, ಸಂಸ್ಕೃತಿಯನ್ನು ಬೆಳಸಬೇಕೆಂದು ನುಡಿದರು.


ಕಾವೂರು ಬಿಜಿಎಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಬ್ರಹ್ಮಣ್ಯ ಸಿ. ಕುಂದೂರು ಅವರು ಮಾತನಾಡಿ, ಪೋಷಕರು, ಮಕ್ಕಳು ಓದುತ್ತಿದ್ದಾರೆ, ಕಲಿಯುತ್ತಿದ್ದಾರೆ ಎಂಬ ತೃಪ್ತಿಕರ ಕಲ್ಪನೆ ಇಟ್ಟುಕೊಳ್ಳದೆ ಮಕ್ಕಳೊಂದಿಗೆ ಮಕ್ಕಳಾಗೆ ಬೆರೆತು ಅವರ ಕಲಿಕೆಯ ಕಡೆಗೆ ಗಮನಹರಿಸಿದರೆ ಮಕ್ಕಳು ಉತ್ತಮವಾಗಿ ರೂಪುಗೊಳ್ಳಲು ಸಾಧ್ಯ ಎಂದು ತಿಳಿಸಿದರು.
ಸಂಸ್ಥೆಯ ಪರಿವೀಕ್ಷಕರಾದ ಬಾಲಕೃಷ್ಣ ಬಿ.ಟಿ ಅವರು ಮಾತನಾಡಿ. ವಿದ್ಯಾರ್ಥಿಗಳಲ್ಲಿ ಶಾಲಾ ಶಿಸ್ತು ಪಾಲನೆ, ಕಲಿಕಾ ಆಸಕ್ತಿಯನ್ನು ಬೆಳಸಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವುದು ಹಾಗೂ ಉತ್ತಮ ಅಂಕಗಳೊಂದಿಗೆ ಜೀವನದ ಗುರಿಯನ್ನು ತಲುಪಿಸುವುದರಲ್ಲಿ ಪೋಷಕರು ಪ್ರೇರಕರಾಗಿರಬೇಕೆಂದು ತಿಳಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷ್ಮಿ ಪಿ., ಪ್ರಾಸ್ತವಿಕ ಮಾತುಗಳೊಂದಿಗೆ ಶೈಕ್ಷಣಿಕ ವರ್ಷದ ಕಾರ್ಯಯೋಜನೆ, ಕಲಿಕಾ ಸಿದ್ಧತೆಗಳನ್ನು ತಿಳಿಸಿದರು ದೈಹಿಕ ಶಿಕ್ಷಣ ಶಿಕ್ಷಕ ಮೋಹನ್ ಹೆಚ್ ಸ್ವಾಗತಿಸಿ, ಸಮಾಜ ಶಿಕ್ಷಕಿ ರಜನಿ ಹೆಚ್ ವಂದಿಸಿದರು. ಶಿಕ್ಷಕಿ ಭವ್ಯ ವೈ, ಡೊಂಬಯ ಗೌಡ ಸಹಕರಿಸಿದರು. ವಿಜ್ಞಾನ ಶಿಕ್ಷಕಿ ಸವಿತಾ ಪಿ.ಸಿ. ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here