ಹೊರಗುತ್ತಿಗೆ ನೌಕರರಿಗೆ ನೇರಪಾವತಿ ಖಚಿತ ಪೌರಾಡಳಿತ ಸಚಿವ ರಹೀಂಖಾನ್ ಭರವಸೆ – ಸಚಿವರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪುತ್ತೂರಿನ ಪ್ರಮುಖರು ಭಾಗಿ

0

ಪುತ್ತೂರು: ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನೌಕರರಿಗೆ ಗುತ್ತಿಗೆ ಪದ್ದತಿ ರದ್ದುಗೊಳಿಸಿ, ನೇರಪಾವತಿ ಜಾರಿಗೊಳಿಸುವುದು ಖಚಿತ ಎಂದು ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಭರವಸೆ ನೀಡಿದ್ದಾರೆ.
ಬೆಂಗಳೂರು ಶಾಸಕರ ಭವನದ ಸಮ್ಮೇಳನ ಸಭಾಂಗಣದಲ್ಲಿ ’ಕರ್ನಾಟಕ ರಾಜ್ಯ ನಗರ ಪಾಲಿಕೆ ನಗರಸಭೆ ಪುರಸಭೆ ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘ’ ಆಯೋಜಿಸಿದ್ದ ಸಚಿವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳಲ್ಲಿ ಕಸ ಸಾಗಿಸುವ ವಾಹನ ಚಾಲಕರು ನೀರು ಸರಬರಾಜು ಸಹಾಯಕರು ನಿಜವಾದ ದುಡಿಮೆಗಾರರಾಗಿದ್ದಾರೆ ಎಂದರು. ಕಸ ಗುಡಿಸುವ ಪೌರಕಾರ್ಮಿಕರನ್ನು ನೇರಪಾವತಿ ಅಡಿಗೆ ತಂದು ಇನ್ನುಳಿದ ಕಸ ಸಾಗಿಸುವ ಚಾಲಕರು ನೀರು ಸರಬರಾಜು ಸಹಾಯಕರನ್ನು ಗುತ್ತಿಗೆ ಪದ್ದತಿಯಲ್ಲೇ ಉಳಿಸಿರುವುದು ತಾರತಮ್ಯದ ಕ್ರಮವಾಗಿದೆ. ಈ ನೌಕರರನ್ನು ನೇರಪಾವತಿ ವ್ಯವಸ್ಥೆಗೆ ತರುವ ಸಂಬಂಧ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ತೀರ್ಮಾನ ಕೈಗೊಳ್ಳಲಾಗುವುದು. ಬಜೆಟ್ ಅಧಿವೇಶನದ ನಂತರ ಅಧಿಕಾರಿಗಳು ಹಾಗೂ ಸಂಘದ ಪ್ರತಿನಿಧಿಗಳೊಂದಿಗೆ ಕುಂದುಕೊರತೆ ಸಭೆ ಆಯೋಜಿಸಿ ಸಮಸ್ಯೆಗಳ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು. ಈ ಸಂದರ್ಭ ಹೊರಗುತ್ತಿಗೆದಾರರ ನೌಕರರ ಸಂಘದ ರಾಜ್ಯಾಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಗೌರವಾಧ್ಯಕ್ಷ ವಿರೇಶ್, ಕಲ್ಬುರ್ಗಿ ವಿಭಾಗ ಸಂಚಾಲಕ ಸಿದ್ದರಾಮ ಪಾಟೀಲ, ಬೆಳಗಾವಿ ವಿಭಾಗದ ರಾಜೂ ಹೊಸಮನಿ, ದಕ್ಷಿಣ ಕನ್ನಡ ಕರಾವಳಿ ವಿಭಾಗದ ಅಣ್ಣಪ್ಪ ಕಾರೆಕ್ಕಾಡು, ಪುತ್ತೂರು ನಗರಸಭೆ ಪೌರಕಾರ್ಮಿಕರ ಸಂಘದ ರಾಧಾಕೃಷ್ಣ ಸಹಿತ ಹಲವಾರು ಮಂದಿ ಸಂವಾದಲ್ಲಿ ಭಾಗಿಯಾದರು.

LEAVE A REPLY

Please enter your comment!
Please enter your name here