ಪುತ್ತೂರು: ತಾಲ್ಲೂಕು ಜನ ಜಾಗೃತಿ ವೇದಿಕೆ ವತಿಯಿಂದ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ ಆಚಾರ್ಯರವರನ್ನು ಜೂ.19ರಂದು ದುರ್ಗಾಂಭ ಸಭಾಂಗಣದಲ್ಲಿ ಅಭಿನಂದಿಸಲಾಯಿತು. ವೇದಿಕೆಯಲ್ಲಿ ತಾಲ್ಲೂಕು ಅಧ್ಯಕ್ಷ ಮಹೇಶ್ ಕೆ ಸವಣೂರು, ಉಪಾಧ್ಯಕ್ಷ ಸೀತಾರಾಮ ಗೌಡ ಪೊಸವಳಿಕೆ, ಯೋಜನಾಧಿಕಾರಿ ಮೇದಪ್ಪ ನಾವೂರು, ತಾಲ್ಲೂಕು ಸಮಿತಿ ಸದಸ್ಯ ಶಿವಪ್ರಸಾದ್ ಮೈಲೇರಿ, ತಾಲ್ಲೂಕು ಒಕ್ಕೂಟ ಅಧ್ಯಕ್ಷ ಸಂತೋಷ ಕೆ,ಬಿಳಿನೆಲೆ ವಲಯ ಸದಸ್ಯ ಗೋಪಾಲಕೃಷ್ಣ ಮೊದಲಾದವರು ಉಪಸ್ಥಿತರಿದ್ದರು.
