ಪುತ್ತೂರು: 110/33/11ಕೆವಿ ವುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110ಕೆವಿ ಮತ್ತು 33ಕೆ.ವಿ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಜೂ.22(ಗುರುವಾರ) ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ, 33ಕೆವಿ ಪುತ್ತೂರು-ಕುಂಬ್ರ-ಬೆಳ್ಳಾರೆ, 33ಕೆ.ವಿ ಪುತ್ತೂರು-ಸುಳ್ಯ ಹಾಗೂ 33ಕೆ.ವಿ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕಂಪ್ಯೂ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ಎದ್ಯುತ್ ಸರಬರಾಜಾಗುವ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.