ವಿದ್ಯುತ್ ದರ ಏರಿಕೆ ವಿರೋಧಿಸಿ ಜೂ.22ರಂದು ಬಂದ್‌ಗೆ ಕರೆ ನೀಡಿಲ್ಲ

0

ಬೆಂಗಳೂರು:ವಿದ್ಯುತ್ ದರ ಏರಿಕೆ ವಿರೋಧಿಸಿ ಜೂ.22 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿಲ್ಲ ಎಂದು ಕರ್ನಾಟಕ ಚೇಂಬರ್ ಆಫ್ ಕಾಮರ್ಸ್ ಹಾಗೂ ಇಂಡಸ್ಟ್ರೀ (ಎಫ್‌ಕೆಸಿಸಿಐ) ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಸ್ಪಷ್ಪಪಡಿಸಿದ್ದಾರೆ. ನಮಗೂ ಕರ್ನಾಟಕ ಬಂದ್‌ಗೂ ಸಂಬಂಧವಿಲ್ಲ, ವಿದ್ಯುತ್ ದರ ಇಳಿಕೆ ಬಗ್ಗೆ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದೇವೆ. ತೆರಿಗೆಯನ್ನು ಶೇ. 9ರಿಂದ ಶೇ.3ಕ್ಕೆ ಇಳಿಕೆ ಮಾಡಲು ಮನವಿ ಮಾಡಿದ್ದೇವೆ. ಸರ್ಕಾರ ಏನು ಮಾಡಲಿದೆ ಎಂಬುದನ್ನು ಕಾದು ನೋಡುತ್ತೇವೆ ಎಂದವರು ಹೇಳಿದ್ದಾರೆ.

ಪುತ್ತೂರು, ಮಂಗಳೂರು ವರ್ತಕ ಸಂಘದಿಂದಲೂ ಬೆಂಬಲವಿಲ್ಲ

ವಿದ್ಯುತ್ ದರ ಏರಿಕೆ ವಿರೋಧಿಸಿ ಕರ್ನಾಟಕ ಬಂದ್‌ಗೆ ದ.ಕ.ಜಿಲ್ಲೆಯ ಕೆನರಾ ಛೇಂಬರ್ ಆಫ್‌ ಕಾಮರ್ಸ್ ಆಂಡ್ ಇಂಡಸ್ಟ್ರಿ ಮಂಗಳೂರು ಮತ್ತು ಪುತ್ತೂರು ಛೇಂಬರ್ ಆಫ್‌ ಕಾಮರ್ಸ್ ಆಂಡ್ ಇಂಡಸ್ಟ್ರಿ ಬೆಂಬಲ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಬಂದ್ಗೆ ಬೆಂಬಲ ಘೋಷಿಸಿದ್ದಾರೆ

LEAVE A REPLY

Please enter your comment!
Please enter your name here