ದ.ಕ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಎಲ್.ಕೆ.ಅತೀಕ್ ನೇಮಕ

0

ಬೆಂಗಳೂರು:ಸರಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಇಲಾಖಾ ಮುಖ್ಯಸ್ಥರನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದ.ಕ.ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರನ್ನು ನೇಮಕಗೊಳಿಸಲಾಗಿದೆ.

ಪ್ರಸ್ತುತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯಲ್ಲಿ ಅಪರ ಮುಖ್ಯ ಕಾರ್ಯದರ್ಶಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಎಲ್.ಕೆ.ಅತೀಕ್ ಅವರನ್ನು ರಾಜ್ಯ ಸರಕಾರ ಕೆಲವು ದಿನಗಳ ಹಿಂದೆಯಷ್ಟೆ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿ ನೇಮಕಗೊಳಿಸಿ ಹಣಕಾಸು ಇಲಾಖೆಯ ಹೊಣೆಯನ್ನು ವಹಿಸಿದೆ. ಜೂ.30ರಂದು ವಯೋ ನಿವೃತ್ತಿ ಹೊಂದಲಿರುವ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್‌ಎನ್ ಪ್ರಸಾದ್ ಅವರಿಂದ ತೆರವಾಗಲಿರುವ ಹುದ್ದೆಗೆ ಎಲ್.ಕೆ.ಅತೀಕ್ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಈ ಹಿಂದೆ ಸರಕಾರದ ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ.ಈ ಹಿಂದೆ ಪ್ರಧಾನ ಮಂತ್ರಿಗಳ ಕಾರ್ಯಾಲಯದಲ್ಲಿಯೂ ಇವರು ಕರ್ತವ್ಯ ನಿರ್ವಹಿಸಿದ್ದರು. ಸಿದ್ಧರಾಮಯ್ಯ ಅವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಮುಖ್ಯಮಂತ್ರಿಯವರ ಅಧೀನ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಸರಕಾರದ ಅಧೀನ ಕಾರ್ಯದರ್ಶಿ ಎಸ್.ಕಲ್ಪನ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here