ಉಪ್ಪಿನಂಗಡಿ ದಿವ್ಯಜ್ಯೋತಿ ಸಂಜೀವಿನಿ ಒಕ್ಕೂಟದಿಂದ ಮಾಸಿಕ ಸಂತೆ

0

ಪುತ್ತೂರು: ಉಪ್ಪಿನಂಗಡಿ ಗ್ರಾಮ ಪಂಚಾಯತ್ ಮಟ್ಟದ ದಿವ್ಯಜ್ಯೋತಿ ಸಂಜೀವಿನಿ ಒಕ್ಕೂಟ ಸಹಯೋಗದೊಂದಿಗೆ ಉಪ್ಪಿನಂಗಡಿ ಜಂಕ್ಷನ್ ನಲ್ಲಿ ಮಾಸಿಕ ಸಂತೆಯ ಉದ್ಘಾಟನೆ ನಡೆಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಮುಳಿಯ, ಪುತ್ತೂರು ತಾಲೂಕು ಕೃಷಿಯೇತರ ವ್ಯವಸ್ಥಾಪಕಿ ನಳಿನಿ ಮೇಡಮ್, ಉಪ್ಪಿನಂಗಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಲ್ಫ್ರೆಡ್ ಲಾರೆನ್ಸ್ ರೊಡ್ರಿಗಸ್, ಪುತ್ತೂರು ತಾಲೂಕು BRP-EPಅಂಕಿತ, ದಿವ್ಯಜ್ಯೋತಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಮತ್ತು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಗ್ರಾಮ ಪಂಚಾಯತ್ ಸದಸ್ಯರು ಮತ್ತು ಸಿಬ್ಬಂದಿ ವರ್ಗ, ಉಪಸ್ಥಿತರಿದ್ದರು, ತಿಂಗಳ ಸಂತೆಯಲ್ಲಿ ವಿವಿಧ ಬಗೆಯ ತಿಂಡಿ, ತರಕಾರಿಗಳನ್ನು ಮಹಿಳಾ ಉದ್ಯಮಿಗಳು ಮಾರಾಟ ಮಾಡಿದರು. ಸ್ವಸಹಾಯ ಸಂಘಗಳು ಮತ್ತು ಸಂಜೀವಿನಿ ಒಕ್ಕೂಟದ ಸದಸ್ಯರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here