ವಿದ್ಯುತ್ ಶಾಕ್‌ನಿಂದ ಮರಣ ಹೊಂದಿದ ಆದಿಲ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿಯವರಿಗೆ ಮನವಿ

0

ಪುತ್ತೂರು: ಕಳೆದ ವರ್ಷ ಜೂನ್ ತಿಂಗಳ ಭಾರೀ ಮಳೆಯಲ್ಲಿ ಪ್ರಾಕ್ರತಿಕ ವಿಕೋಪದಿಂದ ವಿದ್ಯುತ್ ಲೈನ್‌ಗೆ ಮರದ ಕೊಂಬೆ ಬಿದ್ದು ವಿದ್ಯುತ್ ಪ್ರವಹಿಸಿ ದುರ್ಮರಣಕ್ಕೀಡಾದ ಐವರ್ನಾಡು ನಿವಾಸಿ 7 ವರ್ಷದ ಬಾಲಕ ಮಹಮ್ಮದ್ ಆದಿಲ್ ಕುಟುಂಬಕ್ಕೆ ಪರಿಹಾರ ಒದಗಿಸುವಂತೆ ಮೆಸ್ಕಾಂಗೆ ಆದೇಶ ನೀಡಬೇಕೆಂದು ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಪ್ರದಾನ ಕಾರ್ಯದರ್ಶಿ ಕೆ.ಎಂ. ಮುಸ್ತಾಫರವರು ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಮನವಿ ಸ್ವೀಕರಿಸಿದ ಮುಖ್ಯಮಂತ್ರಿಯವರು ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆಯುವಂತೆ ಸೂಚಿಸಿದರು. ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ. ಜಯರಾಮ್, ಮಾಜಿ ತಾಲೂಕು ಪಂಚಾಯತ್ ಸದಸ್ಯ ಅಬ್ದುಲ್ ಗಫೂರ್ ಕಲ್ಮಡ್ಕ, ಸುಳ್ಯ ಬ್ಲಾಕ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇಸ್ಮಾಯಿಲ್ ಪಡ್ಪಿನಂಗಡಿ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here