ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಶಾಲೆಗಳಿಗೆ ಪ್ರತಿಭಾ ಪುರಸ್ಕಾರ, ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ

0

ಪುತ್ತೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಯಲ್ಲಿ ಶೇ.100 ಸಾಧನೆಗೈದ 28 ಶಾಲೆಗಳಿಗೆ ಮತ್ತು ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ಮುಖ್ಯ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಪ್ರಧಾನವಾಗಿ ಒತ್ತಡ ರಹಿತ ಕಾರ್ಯಗಳನ್ನು ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಅವರಿಗೆ ಸನ್ಮಾನ ಕಾರ್ಯಕ್ರಮ ಜೂ.19 ರಂದು ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಆತಿಥ್ಯದಲ್ಲಿ ಬಂಟರ ಭವನದಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ತಾಲೂಕು ಪ್ರೌಢಶಾಲಾ ಮುಖ್ಯಸ್ಥರ ಸಂಘ ಮತ್ತು ಪುತ್ತೂರು ತಾಲೂಕು ಸಹ ಶಿಕ್ಷಕರ ಸಂಘದ ವತಿಯಿಂದ ಕಾರ್ಯಕ್ರಮ ನಡೆಯಿತು.

ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕ ಕಾವು ಹೇಮನಾಥ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಪುತ್ತೂರು ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ನಾರಾಯಣ ಕೆ ಅಧ್ಯಕ್ಷತೆ ವಹಿಸಿದ್ದರು. ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಬ್ರಹಾಂ ಎಸ್ ಎ, ಕಡಬ ತಾಲೂಕು ಸಹ ಶಿಕ್ಷಕರ ಸಂಘದ ಅಧ್ಯಕ್ಷ ಶಾಂತರಾಮ ಓಡ್ಲ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ಸುಂದರ ಗೌಡ, ಅಕ್ಷರದಾಸೋಹ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್, ಬಿ ಆರ್ ಸಿ ನವೀನ್ ವೇಗಸ್, ಶಿಕ್ಷಣ ಸಂಯೋಜಕ ಹರಿಪ್ರಸಾದ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್

ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್ ಆರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಅಕ್ಷರದಾಸೋಹ ನಿರ್ದೇಶಕ ವಿಷ್ಣುಪ್ರಸಾದ್ ವಂದಿಸಿದರು. ಅಮೃತಕಲಾ ಕಾರ್ಯಕ್ರಮ‌ ನಿರೂಪಿಸಿದರು.

LEAVE A REPLY

Please enter your comment!
Please enter your name here