ಪುತ್ತೂರಿನಲ್ಲಿ ಹಾಲು ಪ್ಯಾಕಿಂಗ್‌ ಘಟಕ – ದ.ಕ ಹಾಲು ಘಟಕದ ಪದಾಧಿಕಾರಿಗಳೊಂದಿಗೆ ಶಾಸಕರ ಸಭೆ

0

ಪುತ್ತೂರು: ಪುತ್ತೂರಿನಲ್ಲಿ ದ ಕ ಜಿಲ್ಲಾ ಹಾಲು ಒಕ್ಕೂಟದ ವತಿಯಿಂದ ಸುಮಾರು 60 ಕೋಟಿ ರೂ. ವೆಚ್ಚದಲ್ಲಿ ಹಾಲು ಪ್ಯಾಕಿಂಗ್ ಘಟಕ ನಿರ್ಮಾಣ ಮಾಡುವ ಉದ್ದೇಶದಿಂದ ಪುತ್ತೂರಿನ ಶಾಸಕ ಅಶೋಕ್‌ ರೈ ಹಾಲು ಒಕ್ಕೂಟದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಪುತ್ತೂರಿನಲ್ಲಿ ಸುಮಾರು 15 ಎಕ್ರೆ ಪ್ರದೇಶದಲ್ಲಿ ಈ ಘಟಕ ನಿರ್ಮಾಣವಾಗಲಿದೆ. ಪುತ್ತೂರು ತಾಲೂಕಿನ ವಿವಿಧ ಕಡೆಗಳಲ್ಲಿ ಜಾಗವನ್ನು ಗುರುತಿಸಲಾಗಿದ್ದು, ಪರಿಶೀಲಿಸುವಂತೆ ಒಕ್ಕೂಟಕ್ಕೆ ಶಾಸಕರು ಸೂಚನೆ ನೀಡಿದ್ದಾರೆ. ಘಟಕ ಆರಂಭವಾದಲ್ಲಿ ಪುತ್ತೂರಿನ ಸುಮಾರು ಸಾವಿರದಷ್ಟು ಜನರಿಗೆ ಉದ್ಯೋಗ ಲಭಿಸಲಿದೆ. ಪುತ್ತೂರಿನಲ್ಲಿ ವಿವಿಧ ಕೈಗಾರಿಕಾ ಘಟಕಗಳನ್ನು ಪ್ರಾರಂಭಿಸಲು ಶಾಸಕರು ಉತ್ಸುಕರಾಗಿದ್ದು, ಇದರಿಂದ ಸ್ಥಳೀಯರಿಗೆ ಉದ್ಯೋಗ ದೊರಕಲಿದೆ. ಜೊತೆಗೆ ಪುತ್ತೂರಿನ ಅಭಿವೃದ್ದಿಗೂ ಪೂರಕವಾಗಲಿದೆ ಎಂದು ಶಾಸಕರು ಹೇಳಿದರು.


ಸಭೆಯಲ್ಲಿ ಸಹಾಯಕ ಕಮಿಷನರ್ ,ತಹಶಿಲ್ದಾರ್, ರೆವೆನ್ಯೂ ಇನ್ಸ್ಪೆಕ್ಟರ್‌, ದ.ಕ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ ಶೆಟ್ಟಿ, ಉಪಾಧ್ಯಕ್ಷ ಎಸ್ ಬಿ ಜಯರಾಮ ರೈ, ನಿರ್ದೆಶಕರಾದ ನಾರಾಯಣ ಪ್ರಕಾಶ್, ಸುಧಾಕರ್ ರೈ, ವ್ಯವಸ್ಥಾಪಕ ರವಿರಾಜ್ ಉಡುಪ, ಸಹಾಯಕ ವ್ಯವಸ್ಥಾಪಕರಾದ ಡಾ.ಸತೀಶ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here