ಜೂ. 22,23 : ಬೆಟ್ಟಂಪಾಡಿ ಸರಕಾರಿ ಪ್ರಥಮ ದರ್ಜೆ ಕಾಲೇಜು ವಾರ್ಷಿಕೋತ್ಸವ

0

ಬೆಟ್ಟಂಪಾಡಿ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮಗಳು ಜೂ. 22 ಮತ್ತು 23 ರಂದು ಕಾಲೇಜು ಆವರಣದಲ್ಲಿ ನಡೆಯಲಿದೆ.
ಜೂ. 22 ರಂದು ಬೆಳಿಗ್ಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದೆ‌. ಕಾಲೇಜಿನ ಪ್ರಾಂಶುಪಾಲ ಡಾ. ವರದರಾಜ ಚಂದ್ರಗಿರಿ, ಬೆಟ್ಟಂಪಾಡಿ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಗೋಪಾಲ ಗೌಡ, ಕಾಲೇಜಿನ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತ್ಯನಾರಾಯಣ ಅಡಿಗ ಭಾಗವಹಿಸಲಿದ್ದಾರೆ. ಬಳಿಕ ಕಾಲೇಜು ಯಕ್ಷಗಾನ ಸಂಘದ ಸದಸ್ಯರಿಂದ ‘ಸುದರ್ಶನ ವಿಜಯ – ಶಶಿಪ್ರಭಾ ಪರಿಣಯ’ ಯಕ್ಷಗಾನ ಪ್ರದರ್ಶನ ನಡೆಯಲಿದೆ.


ಜೂ. 23 ರಂದು ವಾರ್ಷಿಕೋತ್ಸವ ಸಮಾರಂಭ ನಡೆಯಲಿದೆ. ಸಭಾಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ಸರಕಾರಿ ಮಹಿಳಾ ಪ್ರಥಮದರ್ಜೆ ಕಾಲೇಜಿನ ಸಹಪ್ರಾಧ್ಯಾಪಕ ಡಾ. ನರೇಂದ್ರ ರೈ ದೇರ್ಲ ಭಾಗವಹಿಸಲಿದ್ದಾರೆ. ಬಳಿಕ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.‌
ಗ್ರಾಮೀಣ ಭಾಗದಲ್ಲಿದ್ದರೂ ಬೆಟ್ಟಂಪಾಡಿ ಸರಕಾರಿ ಕಾಲೇಜು ವಿಶ್ವವಿದ್ಯಾನಿಲಯ ಮಟ್ಟದಲ್ಲಿ ಅನೇಕ ಶೈಕ್ಷಣಿಕ, ಕಲಾ ಸಾಧನೆಗಳನ್ನು ಮಾಡಿ ಹೆಸರು ಪಡೆದಿದೆ.

LEAVE A REPLY

Please enter your comment!
Please enter your name here