ಉಪ್ಪಿನಂಗಡಿ: ಗಾಂಜಾ ಸೇವನೆ-ಆರೋಪಿ ಪೊಲೀಸ್ ವಶ

0

ಪುತ್ತೂರು: ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದ ಬಿಳಿಯೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಗಾಂಜಾ ಸೇವನೆ ಮಾಡಿ ಅನುಚಿತವಾಗಿ ವರ್ತಿಸುತ್ತಿದ್ದ ಮಹಮ್ಮದ್ ಸರ್ಫರಾಜ್ (26ವ.)ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಜೂ.19ರಂದು ಮಧ್ಯಾಹ್ನ ಉಪ್ಪಿನಂಗಡಿ ಪೊಲೀಸರು ರೌಂಡ್ಸ್‌ನಲ್ಲಿದ್ದ ಸಂದರ್ಭ ಬಿಳಿಯೂರು ಕ್ರಾಸ್ ಬಸ್ ನಿಲ್ದಾಣದ ಬಳಿ ಮಹಮ್ಮದ್ ಸರ್ಫರಾಜ್ ನಿಂತುಕೊಂಡು ಹೀನಾಯವಾಗಿ ಮಾತನಾಡುತ್ತಾ, ಅನುಚಿತವಾಗಿ ವರ್ತಿಸುತ್ತಿರುವುದನ್ನು ಕಂಡು ವಿಚಾರಿಸಿದಾಗ ಆತ ಮಾದಕ ದ್ರವ್ಯ ಗಾಂಜಾ ಸೇವನೆ ಮಾಡಿರುವುದನ್ನು ಒಪ್ಪಿಕೊಂಡಿದ್ದ. ಬಳಿಕ ಆತನನ್ನು ವಶಕ್ಕೆ ಪಡೆದುಕೊಂಡು ಪುತ್ತೂರು ಸರಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯವರ ಮುಂದೆ ಹಾಜರುಪಡಿಸಿದ್ದು ವೈದ್ಯರು ಪರೀಕ್ಷಿಸಿ ಮಹಮ್ಮದ್ ಸರ್ಫರಾಜ್ ಗಾಂಜಾ ಸೇವನೆ ಮಾಡಿರುವ ಬಗ್ಗೆ ಪಾಸಿಟಿವ್ ದೃಢಪತ್ರ ನೀಡಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ: 27 (ಬಿ) ಎನ್.ಡಿ.ಪಿ.ಎಸ್ ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here