ಪುತ್ತೂರು: ಹುಬ್ಬಳ್ಳಿಯ ಕರ್ನಾಟಕ ರಾಜ್ಯ ಕಾನೂನು ಮಹಾವಿದ್ಯಾಲಯದಲ್ಲಿ ನಡೆದ ರಾಜ್ಯ ಮಟ್ಟದ ಅಂತರ್ ವಲಯ ಯುವಜನೋತ್ಸವ-2023ರಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಸ್ಪರ್ಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ. ರಾಜ್ಯ ಮಟ್ಟದಲ್ಲಿ ನಡೆದ ಈ ಸ್ಪರ್ಧೆಯಲ್ಲಿ ವಿವಿಧ ವಲಯಗಳಿಂದ ಆಯ್ದ 30 ಕಾಲೇಜುಗಳ ವಿದ್ಯಾರ್ಥಿ ತಂಡಗಳು ಭಾಗವಹಿಸಿದ್ದವು. ಈ ಸ್ಪರ್ಧೆಯಲ್ಲಿ ಪುತ್ತೂರಿನ ವಿವೇಕಾನಂದ ಕಾನೂನು ಮಹಾವಿದ್ಯಾಲಯದ 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿನಿ ಗಾಯತ್ರಿ ಭಟ್ ಲಘು ಸಂಗೀತದಲ್ಲಿ ಪ್ರಥಮ ಸ್ಥಾನ, 4ನೇ ವರ್ಷದ ಬಿ.ಎ ಎಲ್.ಎಲ್.ಬಿ ವಿದ್ಯಾರ್ಥಿ ಶ್ರೇಯಸ್ ಎಂ ರಾವ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, 3ನೇ ವರ್ಷದ ಎಲ್.ಎಲ್.ಬಿ ವಿದ್ಯಾರ್ಥಿನಿ ಪ್ರತೀಕ್ಷಾ ಹಾಗೂ ತಂಡದವರು ಪ್ರಸ್ತುತಪಡಿಸಿದ ಕಿರುನಾಟಕಕ್ಕೆ ಪ್ರಥಮ ಸ್ಥಾನ ಪಡೆದುಕೊಂಡು, ಅಂತರ್ ವಲಯ ಯುವಜನೋತ್ಸವ-2023ರಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
